Wednesday, October 5, 2022

Latest Posts

ಸಿಎಂ ಬದಲಾವಣೆ ಮಾತುಗಳಿಗೆ ಯಾವುದೇ ಆಧಾರವಿಲ್ಲ-ಸಿಎಂ ಬಸವರಾಜ ಬೊಮ್ಮಾಯಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್: 

ಮುಖ್ಯಮಂತ್ರಿ ಬದಲಾವಣೆಯ ಮಾತುಗಳಿಗೆ ಯಾವುದೇ ಆಧಾರ ಇಲ್ಲ, ಇದೊಂದು ರಾಜಕೀಯ ಪ್ರೇರಿತ ನಡೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಇಂದು ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಇದರಿಂದ ನನ್ನ ನಿರ್ಣಯಗಳು ಇನ್ನಷ್ಟು ಗಟ್ಟಿಯಾಗುತ್ತದೆ.

ಇನ್ನೂ ಹೆಚ್ಚಿನ ಕೆಲಸವನ್ನು ಜನರಿಗೆ, ರಾಜ್ಯಕ್ಕೆ ಮಾಡಬೇಕೆಂಬ ಪ್ರೇರಣೆಯನ್ನು ಈ ಎಲ್ಲಾ ವಿಚಾರಗಳು ಕೊಟ್ಟಿವೆ. ದಿನಕ್ಕೆ ಇನ್ನೂ 2 ಗಂಟೆಗಳ ಕಾಲ ಹೆಚ್ಚಿನ ಕೆಲಸ, ರಾಜ್ಯದ ಅಭಿವೃದ್ಧಿಗೆ ಅತಿ ಹೆಚ್ಚು ಸಮಯವನ್ನು ನೀಡಲಾಗುವುದು. ಬರುವ ದಿನಗಳಲ್ಲಿ ಪಕ್ಷದ ಬಲವರ್ಧನೆ ಹಾಗೂ ಜನರ ಬಳಿಗೆ ಹೋಗುವ ಕೆಲಸವನ್ನು ದೊಡ್ಡ ಪ್ರಮಾಣದಲ್ಲಿ ಮಾಡಲಾಗುವುದು ಎಂದರು.

ಕಾಂಗ್ರೆಸ್ ಮನಸ್ಸಿನಲ್ಲಿ ಅತಂತ್ರ

ಕಾಂಗ್ರೆಸ್ ಏನೋ ಅಂದುಕೊಂಡಿದ್ದಾರೆ, ಅವರ ಮನಸ್ಸಿನಲ್ಲಿ ಅತಂತ್ರ ಇದೆ. ಅದನ್ನು ರಾಜ್ಯದ ತುಂಬಾ ಜನರ ಮನಸ್ಸಿನಲ್ಲಿ ಹರಡಬೇಕೆಂದಿದ್ದಾರೆ. ಜನ ಯಾರೂ ಅದನ್ನು ನಂಬುವ ಸ್ಥಿತಿಯಲ್ಲಿ ಇಲ್ಲ. ಅದಕ್ಕಿಂತ ಹೆಚ್ಚಾಗಿ ನಾನು ಸ್ಥಿತಪ್ರಜ್ಞನಾಗಿದ್ದೇನೆ. ಸತ್ಯ ನನಗೆ ಗೊತ್ತಿದೆ ಎಂದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!