ರಾಜ್ಯದಲ್ಲಿ ಸದ್ಯಕ್ಕೆ ‘ಸಚಿವ ಸಂಪುಟ ಪುನಾರಚನೆ’ ಇಲ್ಲ: ಖರ್ಗೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ರಾಜ್ಯದಲ್ಲಿ ಸದ್ಯಕ್ಕೆ ಸಚಿವ ಸಂಪುಟ ಪುನಾರಚನೆ ಅಥವಾ ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಎಐಸಿಸಿ ಮುಂದೆ ಯಾವುದೇ ಪ್ರಸ್ತಾವನೆ ಇಲ್ಲ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬುಧವಾರ ಹೇಳಿದರು.

ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಖರ್ಗೆ, ಸಚಿವ ಸಂಪುಟ ಪುನಾರಚನೆ ಅಥವಾ ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ನಿರ್ಧರಿಸಿದಾಗ ತಿಳಿಸುತ್ತೇವೆ ಎಂದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮಂಗಳವಾರ ನವದೆಹಲಿಯಲ್ಲಿ ತಮ್ಮನ್ನು ಹಾಗೂ ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಭೇಟಿಯಾದಾಗ ಕರ್ನಾಟಕದಲ್ಲಿನ ಸಚಿವ ಸಂಪುಟ ಪುನಾರಚನೆ ಅಥವಾ ಕೆಪಿಸಿಸಿ ಅಧ್ಯಕ್ಷ ಸ್ಥಾನ ಬದಲಾವಣೆ ಕುರಿತು ಯಾವುದೇ ಮಾತುಕತೆ ನಡೆಸಿಲ್ಲ ಎಂದು ಸ್ಪಷ್ಪಪಡಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!