ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯ ಕಾಂಗ್ರೆಸ್ ರಾಜಕಾರಣದಲ್ಲಿ ಯಾವುದೇ ಅಸ್ತವ್ಯಸ್ತತೆ ಇಲ್ಲ ಎಂದು ಸಚಿವ ಪ್ರಿಯಾಂಕ್ ಖರ್ಗೆ ಸ್ಪಷ್ಟಪಡಿಸಿದ್ದಾರೆ. ಗೊಂದಲ ಇದ್ದರೆ ಅದು ಕೇವಲ ಬಿಜೆಪಿ ಮತ್ತು ಕೆಲವು ಮಾಧ್ಯಮಗಳಲ್ಲಷ್ಟೇ ಎಂದು ಹೇಳಿದ್ದಾರೆ.
ಕಾಂಗ್ರೆಸ್‌ನಲ್ಲಿ ಯಾವ ನಿರ್ಧಾರವಾದರೂ ಹೈಕಮಾಂಡ್ ತೆಗೆದುಕೊಳ್ಳುತ್ತದೆ ಎಂಬುದರಲ್ಲಿ ಯಾವುದೇ ಸಂದೇಹವಿಲ್ಲ. ಬೆಂಗಳೂರು ಟೆಕ್ ಸಮ್ಮಿಟ್‌ಗೆ ರಾಹುಲ್ ಗಾಂಧಿ ಅವರನ್ನು ಆಹ್ವಾನಿಸಿದ್ದರೂ ಅವರು ಬರಲಿಲ್ಲ. ಹೀಗಾಗಿ ದೆಹಲಿಗೆ ತೆರಳಿ ಕೃತಕಬುದ್ಧಿಮತ್ತೆ ತಂತ್ರಜ್ಞಾನ ಕುರಿತು ಅವರಿಗೆ ವಿವರಿಸಿದ್ದೇನೆ. ಜೊತೆಗೆ ಮತಗಳ್ಳತನಕ್ಕೂ ಸಂಬಂಧಿಸಿದ ವಿಷಯಗಳನ್ನು ಚರ್ಚಿಸಲಾಗಿದೆ ಎಂದು ಮಾಹಿತಿ ನೀಡಿದರು. ಇದರ ಹೊರತಾಗಿ ರಾಜ್ಯ ರಾಜಕಾರಣ ಕುರಿತು ಯಾವುದೇ ಮಾತುಕತೆ ನಡೆದಿಲ್ಲ ಎಂದು ಹೇಳಿದರು.
ಅಧಿಕಾರ ಹಸ್ತಾಂತರ ಕುರಿತ ಊಹಾಪೋಹಗಳಿಗೆ ಪ್ರತಿಕ್ರಿಯಿಸಿ, ಈ ಬಗ್ಗೆ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಹಾಗೂ ಎಐಸಿಸಿ ನಾಯಕರು ಈಗಾಗಲೇ ಹೈಕಮಾಂಡ್ ನಿರ್ಧಾರಕ್ಕೆ ಬದ್ಧತೆ ವ್ಯಕ್ತಪಡಿಸಿದ್ದಾರೆ. ಸಂದರ್ಭ ಬಂದಾಗ ಹೈಕಮಾಂಡ್ ಎಲ್ಲವನ್ನೂ ಸ್ಪಷ್ಟಪಡಿಸುತ್ತದೆ ಎಂದು ಹೇಳಿದರು.
ಡಿ.ಕೆ.ಶಿವಕುಮಾರ್‌ಗೆ ಬಿಜೆಪಿ ಬೆಂಬಲ ನೀಡಲಿದೆ ಎನ್ನುವ ಹೇಳಿಕೆಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಖರ್ಗೆ, ನಮಗೆ ಬಿಜೆಪಿ ಬೆಂಬಲ ಬೇಕಾದ ಸ್ಥಿತಿ ಬಂದಿಲ್ಲ, ಅವರೆಲ್ಲ ಹಗಲುಗನಸು ಕಾಣುತ್ತಿದ್ದಾರೆ ಎಂದು ತಿರುಗೇಟು ನೀಡಿದರು.

