ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………
ಹೊಸದಿಗಂತ ಆನ್ ಲೈನ್ ಡೆಸ್ಕ್:
ಕೊರೋನಾ ಮೂರನೇ ಅಲೆ ಮಕ್ಕಳ ಮೇಲೆ ಹೆಚ್ಚು ಪರಿಣಾಮ ಬೀರಲಿದೆ ಎಂಬ ಆತಂಕ ನಡುವೆ ಏಮ್ಸ್ ನಿರ್ದೇಶಕ ಡಾ.ರಂದೀಪ್ ಗುಲೇರಿಯಾ ಖುಷಿ ಸುದ್ದಿಯನ್ನು ನೀಡಿದ್ದು, ಮಕ್ಕಳ ಮೇಲೆ ಹೆಚ್ಚು ಪರಿಣಾಮ ಬೀರುತ್ತದೆ ಎನ್ನಲು ಯಾವುದೇ ಡೇಟಾ ಇಲ್ಲ. ಹೀಗಾಗಿ ಭವಿಷ್ಯದಲ್ಲಿ ಮಕ್ಕಳು ಗಂಭೀರ ಸೋಂಕಿಗೆ ಒಳಗಾಗ್ತಾರೆಂಬ ಆತಂಕವನ್ನೂ ಅವರು ತಳ್ಳಿ ಹಾಕಿದ್ದಾರೆ.
ಆರೋಗ್ಯ ಸಚಿವಾಲಯದ ಸಾಪ್ತಾಹಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಏಮ್ಸ್ ನಿರ್ದೇಶಕರು, ಯಾವುದೇ ಜಾಗತಿಕ ಮತ್ತು ಭಾರತೀಯ ದತ್ತಾಂಶಗಳಲ್ಲಿ ಮಕ್ಕಳಿಗೆ ಹೆಚ್ಚು ಪರಿಣಾಮ ಬೀರಿದೆ ಎಂಬುದು ಕಂಡು ಬಂದಿಲ್ಲ. ಎರಡನೇ ತರಂಗದಲ್ಲಿಯೂ ಸೋಂಕಿಗೆ ಒಳಗಾದ ಮಕ್ಕಳು ಸೋಂಕಿನ ಸೌಮ್ಯ ಲಕ್ಷಣ ಹೊಂದಿದ್ದರು. ಭವಿಷ್ಯದಲ್ಲಿ ಮಕ್ಕಳಲ್ಲಿ ಗಂಭೀರವಾದ ಸೋಂಕು ಕಾಡಲಿದೆ ಎಂಬುದನ್ನು ನಾನು ನಂಬುವುದಿಲ್ಲ ಎಂದಿದ್ದಾರೆ.