Sunday, June 26, 2022

Latest Posts

COVID UPDATE| ಹೊಸ ಕೊರೋನಾ ಸೋಂಕಿತರ ಸಂಖ್ಯೆಯಲ್ಲಿ ಮತ್ತೆ ಏರಿಕೆ: ನಿನ್ನೆ ಪತ್ತೆಯಾದ ಪ್ರಕರಣಗಳೆಷ್ಟು ಗೊತ್ತಾ?

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..

ಹೊಸದಿಗಂತ ಆನ್ ಲೈನ್ ಡೆಸ್ಕ್:

ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆಯಲ್ಲಿ ಮತ್ತೆ ಏರಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ 39,742 ಹೊಸ ಕೊರೋನಾ ಪ್ರಕರಣಗಳು ಪತ್ತೆಯಾಗಿದೆ. ನಿನ್ನೆ 39,097 ಇದ್ದ ಕೊರೋನಾ ಸೋಂಕಿತರ ಸಂಖ್ಯೆ ಇಂದು ಮತ್ತೆ ಏರಿಕೆಯಾಗಿದೆ.
ಆರೋಗ್ಯ ಸಚಿವಾಲಯ ನೀಡಿರುವ ಮಾಹಿತಿಯ ಪ್ರಕಾರ ಕಳೆದ 24 ಗಂಟೆಯಲ್ಲಿ ದೇಶದಲ್ಲಿ 39,742 ಹೊಸ ಸೋಂಕು ಪ್ರಕರಣಗಳು ವರದಿಯಾಗಿದ್ದು, ಒಟ್ಟಾರೆ ಸೋಂಕಿತರ ಸಂಖ್ಯೆ 3,13,36,131ಕ್ಕೆ ಏರಿಕೆಯಾಗಿದೆ.
ನಿನ್ನೆ ಒಂದೇ ದಿನ ದೇಶದಲ್ಲಿ 39,972 ಕೊರೋನಾ ಸೋಂಕಿತರು ಗುಣಮುಖರಾಗಿದ್ದು, ಗುಣಮುಖರಾದವರ ಸಂಖ್ಯೆ 3,05,43,138 ಕ್ಕೆ ಏರಿಕೆಯಾಗಿದೆ. ಪ್ರಸ್ತುತ ದೇಶದಲ್ಲಿ 4,08,212 ಸೋಂಕಿತರು ವಿವಿಧ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ನಿನ್ನೆ ಒಂದೇ ದಿನ ದೇಶಾದ್ಯಂತ 535 ಮಂದಿ ಸೋಂಕಿತರು ಮೃತಪಟ್ಟಿದ್ದು, ಕೊರೋನಾ ಸೋಂಕಿಗೆ ಬಲಿಯಾದವರ ಸಂಖ್ಯೆ 4,20,551 ಕ್ಕೆ ಏರಿಕೆಯಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_img
spot_img
spot_img
spot_img

Don't Miss