ಹೊಸದಿಗಂತ ವರದಿ ಬೆಳಗಾವಿ:
ಕಾಂಗ್ರೆಸ್ ಪಕ್ಷದಲ್ಲಿ ಯಾವುದೇ ಅಸಮಾಧಾನ, ಭಿನ್ನಾಭಿಪ್ರಾಯ ಇಲ್ಲ. ಎಲ್ಲಲೂ ಒಗ್ಗಟ್ಟಾಗಿದ್ದೇವೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು.
ಬುಧವಾರ ಇಲ್ಲಿನ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್ಲರೂ ನಮ್ಮವರೆ. ಎಲ್ಲ 136 ಶಾಸಕರೂ ನಮ್ಮೊಂದಿಗೆ ಇದ್ದಾರೆ ಎಂದರು.
ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಹಾಗೂ ನನ್ನ ಮಧ್ಯೆ ಯಾವುದೇ ಮನಸ್ತಾಪ ಇಲ್ಲ. ಇದು ಕೇವಲ ಊಹಾಪೋಹ ಎಂದು ಸ್ಪಷ್ಟನೆ ನೀಡುವ ಪ್ರಯತ್ನ ಮಾಡಿದರು.
136 ಶಾಸಕರಿದ್ದು, ಯಾರ ಬಗ್ಗೆಯೂ ನನಗೆ ಅಸಮಾಧಾನ ಇಲ್ಲ. ಇತ್ತೀಚೆಗೆ ಸತೀಶ ಜಾರಕಿಹೊಳಿ ಅವರು ಭೇಟಿ ಆಗಿದ್ದರು. ಮಾತನಾಡಿದ್ದೇವೆ. ಹೀಗಾಗಿ ಅಸಮಾಧಾನ ಎಂಬುದು ಕಪೋಲಕಲ್ಪಿತ ಎಂದು ಡಿ.ಕೆ.ಶಿವಕುಮಾರ್ ಹೇಳಿದರು.