ಹೊಸದಿಗಂತ ಡಿಜಿಟಲ್ ಡೆಸ್ಕ್:
ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹಾಗು ತಮ್ಮ ನಡುವೆ ಯಾವುದೇ ಭಿನ್ನಾಭಿಪ್ರಾಯವಿಲ್ಲ ಎಂದು ಗೃಹ ಸಚಿವ ಜಿ ಪರಮೇಶ್ವರ ಸ್ಪಷ್ಟಪಡಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಲವು ನಾಯಕರು ರಾಜ್ಯ ಕಾಂಗ್ರೆಸ್ ಅಧ್ಯಕ್ಷರು ಬದಲಾಗಬೇಕು ಎಂದು ಬಯಸುತ್ತಾರೆ. ಇನ್ನು ಕೆಲವರು ಶಿವಕುಮಾರ್ ಅವರೇ ಮುಂದುವರಿಯಬೇಕು ಎಂದು ಭಾವಿಸುತ್ತಾರೆ ಎಂದು ಹೇಳಿದರು.
ನನ್ನ ಮತ್ತು ರಾಜ್ಯಾಧ್ಯಕ್ಷ ಮತ್ತು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ನಡುವೆ ಯಾವುದೇ ಭಿನ್ನಾಭಿಪ್ರಾಯವಿಲ್ಲ. ನಾನು ಅವರನ್ನು ಅವರ ನಿವಾಸದಲ್ಲಿ ಭೇಟಿಯಾಗಬಹುದು ಮತ್ತು ನಮ್ಮ ನಡುವೆ ಯಾವುದೇ ಸಮಸ್ಯೆ ಇಲ್ಲ. ನಾವು ತುಂಬಾ ಒಳ್ಳೆಯ ಸ್ನೇಹಿತರು ಎಂದು ಹೇಳಿದರು.