ರಾಜ್ಯ ಕಾಂಗ್ರೆಸ್‌ನಲ್ಲಿ ಯಾವುದೇ ಭಿನ್ನಾಭಿಪ್ರಾಯ, ಆಂತರಿಕ ಜಗಳ ಇಲ್ಲವೇ ಇಲ್ಲ : ಡಿಸಿಎಂ ಡಿಕೆಶಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯದಲ್ಲಿ ಕಾಂಗ್ರೆಸ್ ಭಾರೀ ಅಂತರದಿಂದ ಗೆದ್ದು ಬೀಗಿದೆ. ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದು ನಾಲ್ಕು ದಿನಗಾದರೂ ಇನ್ನೂ ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆಯಾಗಿಲ್ಲ.

ಈಗಾಗಲೇ ಪ್ರಮಾಣವಚನ ಸ್ವೀಕರಿಸಿರುವ ಸಚಿವರಿಗೆ ಖಾತೆ ಹಂಚಿಕೆ ಆಗಿಲ್ಲ. ಈ ಮಧ್ಯೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಖಾತೆ ಹಂಚಿಕೆ ಹಾಗೂ ಸಚಿವ ಸ್ಥಾನಗಳ ಬಗ್ಗೆ ಚರ್ಚೆ ನಡೆಸಲು ದೆಹಲಿಗೆ ತೆರಳಿದ್ದಾರೆ.

ಈ ಎಲ್ಲ ವಿದ್ಯಮಾನಗಳಿಂದ ಕಾಂಗ್ರೆಸ್‌ನಲ್ಲಿ ಆಂತರಿಕ ಭಿನ್ನಾಭಿಪ್ರಾಯವೇನಾದರೂ ಇದೆಯೇ ಎಂಬ ಪ್ರಶ್ನೆ ಎದುರಾಗಿತ್ತು. ದೆಹಲಿಗೆ ತೆರಳಿದ ನಾಯಕರು ತಮ್ಮ ಆಪ್ತರಿಗೆ ಸಂಪುಟದಲ್ಲಿ ಸ್ಥಾನ ಒದಗಿಸಲು ಪಟ್ಟು ಹಿಡಿದಿದ್ದು, ಹೈಗೆ ತಲೆನೋವಾಗಿದೆ.

ಈ ಹಿಂದೆ ಈ ಇಬ್ಬರು ನಾಯಕರು ಸಿಎಂ ಸ್ಥಾನಕ್ಕಾಗಿ ಪಟ್ಟು ಹಿಡಿದಿದ್ದರು. ಇದೀಗ ಸಂಪುಟದಲ್ಲಿ ತಮ್ಮ ಆಪ್ತರಿಗೆ ಸ್ಥಾನಕ್ಕಾಗಿ ಪಟ್ಟು ಹಿಡಿದು ಕುಳಿತಿದ್ದಾರೆ. ಈ ಮಧ್ಯೆ ಡಿಸಿಎಂ ಡಿಕೆಶಿ ಮಾಧ್ಯಮದ ಜೊತೆ ಮಾತನಾಡಿದ್ದು, ನಮ್ಮ ಪಕ್ಷದಲ್ಲಿ ಯಾವುದೇ ಆಂತರಿಕೆ ಭಿನ್ನಾಭಿಪ್ರಾಯ, ಜಗಳ, ಮುನಿಸು ಇಲ್ಲ ಎಂದಿದ್ದಾರೆ.

ದೆಹಲಿಯಲ್ಲಿ ಮಾತನಾಡಿದ್ದು, ರಾಜ್ಯದ ಹಿತದೃಷ್ಟಿಯಿಂದ ನಾನಾ ವಿಚಾರಗಳ ಬಗ್ಗೆ ಮುಖಂಡರ ಜೊತೆ ಚರ್ಚೆ ಮಾಡಲಿದ್ದೇವೆ. ಶೀಘ್ರದಲ್ಲೇ ಸಂಪುಟ ಪೂರ್ಣಗೊಳಿಸುತ್ತೇವೆ. ರಾಜ್ಯದ ಜನತೆಗೆ ನೀಡಿರುವ ಭರವಸೆಗಳನ್ನು ಈಡೇರಿಸುತ್ತೇವೆ. ಆಂತರಿಕ ಸಮಸ್ಯೆ ಇದೆ ಎಂಬುದು ಸುಳ್ಳು ಎಂದಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!