Friday, September 29, 2023

Latest Posts

ಮೈತ್ರಿ ಬಗ್ಗೆ ಚರ್ಚೆಯೇ ಆಗಿಲ್ಲ, ಯಾರೂ ಮೈತ್ರಿಗೆ ಮುಂದೆ ಬಂದಿಲ್ಲ: ಎಚ್‌.ಡಿ. ಕುಮಾರಸ್ವಾಮಿ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಮೈತ್ರಿ ಬಗ್ಗೆ ಚರ್ಚೆಯೇ ಆಗಿಲ್ಲ, ಯಾರೂ ಮೈತ್ರಿಗೆ ಮುಂದೆ ಬಂದಿಲ್ಲ. ಯಾರೂ ಮುಂದೆ ಬಾರದೆ ಇದ್ದಾಗ ಯಾರೊಂದಿಗೆ ಮೈತ್ರಿ ಮಾಡಿಕೊಳ್ಳುವುದು? ಸದ್ಯ ಯಾರೊಂದಿಗೂ ಮೈತ್ರಿ ಇಲ್ಲ. ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ನಮ್ಮ ಪಕ್ಷದ ಸಂಘಟನೆಗೆ ವಿಶೇಷ ಒತ್ತು ನೀಡಬೇಕಿದೆ. ಇದಕ್ಕಾಗಿ ಜಿ.ಟಿ.ದೇವೇಗೌಡರ ಅಧ್ಯಕ್ಷತೆಯಲ್ಲಿ ಕೋರ್ ಕಮಿಟಿ ಮಾಡಿದ್ದೇವೆ. ಅವರ ನೇತೃತ್ವದಲ್ಲಿ ನಾಲ್ಕು ತಂಡಗಳಲ್ಲಿ ರಾಜ್ಯ ಪ್ರವಾಸ ಮಾಡುತ್ತೇವೆ ಎಂದು ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ಮೈಸೂರು ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರದ ವೈಫಲ್ಯಗಳನ್ನು ಜ‌ನರಿಗೆ ಮನವರಿಕೆ ಮಾಡಬೇಕಿದೆ. ಇದರ ಜತೆಗೆ ಲೋಕಸಭೆ ಚುನಾವಣೆಯೂ ಬರುತ್ತಿದೆ. ರಾಜಕೀಯ ಪಕ್ಷವಾಗಿ ಚುನಾವಣೆಗೆ ಸಿದ್ಧತೆ ಮಾಡಿಕೊಳ್ಳುತ್ತಿದ್ದೇವೆ ಎಂದು ತಿಳಿಸಿದ್ದಾರೆ.

ಡಿಕೆಶಿ ನಮ್ಮ ನೀರು ತಮಿಳುನಾಡು ಹಕ್ಕು ಎನ್ನುತ್ತಿದ್ದಾರೆ
ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಎಚ್‌.ಡಿ.ಕುಮಾರಸ್ವಾಮಿ, ಈ ಹಿಂದೆ ನಮ್ಮ ನೀರು ನಮ್ಮ ಹಕ್ಕು ಎನ್ನುತ್ತಿದ್ದವರು, ಈಗ ನಮ್ಮ ನೀರು ತಮಿಳುನಾಡು ಹಕ್ಕು ಎನ್ನುತ್ತಿದ್ದಾರೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಗ್ಯಾರಂಟಿ ಯೋಜನೆಗಳಿಗಾಗಿ 86 ಸಾವಿರ ಕೋಟಿ ರೂ. ಬೇಕು. ಈಗ ಮಾಡಿದ ಸಾಲ ತೀರಿಸುವವರು ಯಾರು ಎಂದು ಪ್ರಶ್ನಿಸಿದ ಎಚ್‌ಡಿಕೆ, ಗ್ಯಾರಂಟಿ ಹೆಸರಿನಲ್ಲಿ ಜನರಿಗೆ ಮೋಸ ಮಾಡಲಾಗುತ್ತಿದೆ. 200 ಯೂನಿಟ್ ವಿದ್ಯುತ್ ಉಚಿತ ಎಂದಿದ್ದರು. ಈಗ ಕಂಡೀಷನ್ ಮೇಲೆ ಕಂಡೀಷನ್ ಹಾಕುತ್ತಿದ್ದಾರೆ. ಗ್ಯಾರಂಟಿ ಯೋಜನೆಗಳ ಕಾರಣಕ್ಕಾಗಿ ಅಭಿವೃದ್ಧಿ ನಿಂತೇ ಹೋಗಿದೆ. ಶಾಸಕರಿಗೆ ಅನುದಾನ ಸಿಗುತ್ತಿಲ್ಲ. ಮುಂದೆ ಇದೆಲ್ಲ ಎಲ್ಲಿಗೆ ಹೋಗಿ ನಿಲ್ಲುತ್ತೆ ನೋಡುತ್ತಿರಿ ಎಂದು ಹೇಳಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!