ಹೊಸದಿಗಂತ ವರದಿ ಮಂಡ್ಯ :
ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಹತ್ಯೆಗೆ ಸಂಚು ನಡೆದಿದೆ. ಇದರಲ್ಲಿ ಡೌಟೇ ಇಲ್ಲ. ಇದರಲ್ಲಿ ಗೃಹ ಸಚಿವ ಪರಮೇಶ್ವರ್ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಇದ್ದಾರೆ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಗಂಭೀರ ಆರೋಪ ಮಾಡಿದರು.
ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ವಿಧಾನ ಸೌಧದಲ್ಲಿ 40ರ ತಂಡ ಸಿ.ಟಿ. ರವಿಯವರನ್ನು ಹೊಡೆದು ಕೊಲೆ ಮಾಡಲು ಪ್ರಯತ್ನ ಮಾಡಿದ್ದರ ಬಗ್ಗೆ ನಾನು ಪೊಲೀಸ್ ಠಾಣೆಗೆ ದೂರು ಕೊಡಲು ಹೋಗಿದ್ದೆ. ನಾನು ಪೊಲೀಸ್ ಠಾಣೆಯಲ್ಲಿ ಕುಳಿತಿದ್ದು ನಿಜ ಎಂದು ಡಿ.ಕೆ. ಶಿವಕುಮಾರ್ ಆರೋಪಕ್ಕೆ ತಿರುಗೇಟು ನೀಡಿದರು.
ಝೀರೋ ಕಂಪ್ಲೆಂಟ್ ಕೊಡಬೇಕು ಎಂದು ಹೇಳಿದ್ದರು. ಅದಕ್ಕಾಗಿಯೇ ಪೊಲೀಸ್ ಠಾಣೆಗೆ ಹೋಗಿದ್ದೆನೇ ಹೊರತು, ಸಿ.ಟಿ. ರವಿಯನ್ನು ಬಿಡಿಸಿಕೊಂಡು ಬರುವುದಕ್ಕೆ ಹೋಗಿರಲಿಲ್ಲ ಎಂದು ಸ್ಪಷ್ಟಪಡಿಸಿದರು.
ನಾನೂ ಸಹ ಗೃಹ ಸಚಿವನಾಗಿ ಕೆಲಸ ಮಾಡಿದ್ದೇನೆ. ನನಗೂ ಸಹ ಅವರಿಗಿಂತ ಹೆಚ್ಚಾಗಿ ಕಾನೂನು ಅರಿವಿದೆ. ಗೃಹ ಸಚಿವ ಪರಮೇಶ್ವರ್ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ವಿಚಾರದ ಬಗ್ಗೆ ಗೊತ್ತೇ ಇಲ್ಲ ಎನ್ನುತ್ತಾರೆ. ಹಾಗಾದರೆ ಇದನ್ನೆಲ್ಲಾ ಇನ್ನಾರು ಮಾಡಿಸಿದ್ದಾರೆ ಎಂದು ಪ್ರಶ್ನಿಸಿದರು.