Tuesday, November 25, 2025

POWER CUT | ಇಂದು ನಗರದ ಈ ಎಲ್ಲಾ ಏರಿಯಾಗಳಲ್ಲಿ ಇರಲ್ಲ ಕರೆಂಟ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬೆಂಗಳೂರು ನಗರದಲ್ಲಿ ಇಂದು ಕರೆಂಟ್​​ ಸಮಸ್ಯೆ ಎದುರಾಗಲಿದೆ ಎಂದು ಬೆಸ್ಕಾಂ ಕೇಂದ್ರ ಕಚೇರಿ ಅಧಿಕೃತ ಮಾಹಿತಿ ಹೊರಡಿಸಿದೆ.

ನಗರದ ಉತ್ತರ ಭಾಗದ ಹಲವಾರು ಪ್ರಮುಖ ಪ್ರದೇಶಗಳಲ್ಲಿ ಇಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ವಿದ್ಯುತ್ ಸರಬರಾಜು ಸಂಪೂರ್ಣವಾಗಿ ಸ್ಥಗಿತಗೊಳ್ಳಲಿದೆ. ಕೆಪಿಟಿಸಿಎಲ್‌ನ 66/11 ಕೆವಿ ಎಲ್.ಆರ್. ಬಂಡೆ ಉಪಕೇಂದ್ರದಲ್ಲಿ ತುರ್ತು ನಿರ್ವಹಣಾ ಮತ್ತು ಅಪ್‌ಗ್ರೇಡೇಶನ್ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ಬೆಸ್ಕಾಂ ಈ ವಿದ್ಯುತ್ ಕಡಿತಕ್ಕೆ ಮುಂದಾಗಿದೆ.

ಈ ಕಾಮಗಾರಿಯಿಂದಾಗಿ ಎಲ್.ಆರ್. ಬಂಡೆ ಉಪಕೇಂದ್ರದ ವ್ಯಾಪ್ತಿಯಲ್ಲಿರುವ ಸುಮಾರು 35ಕ್ಕೂ ಹೆಚ್ಚು ಪ್ರದೇಶಗಳಲ್ಲಿ ಮಧ್ಯಂತರವಾಗಿ ವಿದ್ಯುತ್ ಪೂರೈಕೆ ಸ್ಥಗಿತವಾಗಲಿದೆ. ವಿದ್ಯುತ್ ಕಡಿತದ ಸಮಯದಲ್ಲಿ ಯಾವುದೇ ತುರ್ತು ಪರಿಸ್ಥಿತಿ ಎದುರಾದರೆ ಸಾರ್ವಜನಿಕರು ಬೆಸ್ಕಾಂ ಹೆಲ್ಪ್‌ಲೈನ್ 1912ಗೆ ಕರೆ ಮಾಡಬಹುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

66/11 ಕೆವಿ ಎಲ್.ಆರ್.ಬಂಡೆ ಉಪಕೇಂದ್ರ ವ್ಯಾಪ್ತಿಯಲ್ಲಿ ಕೆಪಿಟಿಸಿಎಲ್ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆ ವಿದ್ಯುತ್ ಕಡಿತ ಉಂಟಾಗಲಿದ್ದು, ಇಂದು ಬೆಳಗ್ಗೆ 10 ರಿಂದ ಸಂಜೆ 6ಗಂಟೆ ವರೆಗೆ ಕರೆಂಟ್​ ಸಮಸ್ಯೆ ಎದುರಾಗಲಿದೆ. ಮಧ್ಯಂತರವಾಗಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಹೀಗಾಗಿ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು ಬೆಸ್ಕಾಂ ಕೇಂದ್ರ ಕಚೇರಿ ಅಧಿಕೃತ ಮಾಹಿತಿ ಹೊರಡಿಸಿದೆ.

error: Content is protected !!