ಇಂದು ಬೆಂಗಳೂರಿನ ಹಲವು ಏರಿಯಾಗಳಲ್ಲಿ ಕರೆಂಟ್‌ ಇಲ್ಲ, ನಿಮ್ಮನೆಲೂ ಅದೇ ಕಥೇನಾ ನೋಡಿ..

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಕಳೆದೊಂದು ವಾರದಿಂದ ಇಡೀ ರಾಜ್ಯಾದ್ಯಂತ ಆಗಾಗ ಕರೆಂಟ್​​ ಹೋಗುತ್ತಲೇ ಇದೆ. ಇದರಿಂದ ಜನರಿಗೆ ಬಹಳ ತೊಂದರೆ ಆಗಿದೆ. ಈಗ ಇಂದು ಕೂಡ ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ವ್ಯತ್ಯಯ ಆಗಲಿದೆ ಅನ್ನೋ ಮಾಹಿತಿ ತಿಳಿದು ಬಂದಿದೆ.

ಇಂದು ಎಂದರೆ ಫೆಬ್ರವರಿ​ 15ನೇ ತಾರೀಕು 66/11 kV ವಿಡಿಯಾ ಸಬ್‌ಸ್ಟೇಷನ್ ಕೆಪಿಟಿಸಿಎಲ್‌ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಹಾಗಾಗಿ ಜಾಲಹಳ್ಳಿ ವಿಭಾಗದ ಎನ್-9 ಉಪ ವಿಭಾಗದ ವ್ಯಾಪ್ತಿಗೆ ಬರೋ ಪ್ರದೇಶಗಳಲ್ಲಿ ಇಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆವರೆಗೆ ವಿದ್ಯುತ್‌ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.

ಹಾವನೂರು ಬಡಾವಣೆ, ಕುರುಬರಹಳ್ಳಿ, ರಾಜಾಜಿನಗರ, ಮಂಜುನಾಥ್ ನಗರ, ಮಹಾಲಕ್ಷ್ಮಿ ನಗರ, ಕಾಟರಾಯ ನಗರ, ಸೋಪ್ ಫ್ಯಾಕ್ಟರಿ ಲೇಔಟ್, ವಿಜಯಲಕ್ಷ್ಮಿ ಲೇಔಟ್, ಅಂದಾನಪ್ಪ ಲೇಔಟ್, ಬಿಟಿಎಸ್ ಲೇಔಟ್, ಸಿದ್ದೇಶ್ವರ ಲೇಔಟ್, ಸಾಸುವೆಘಟ್ಟ, ಸೋಲದೇವನಹಳ್ಳಿ, ವಿನಾಯಕ ನಗರ, ವಿಕಾಸ್ ನಗರ, ಶೋಭಾ ಅಪಾರ್ಟ್‌ಮೆಂಟ್, 8 ನೇ ಮೈಲ್ ರಸ್ತೆ, ರಾಮಯ್ಯ ಲೇಔಟ್, ನಾರಾಯಣ ಲೇಔಟ್, ವಿಡಿಯಾ ಸ್ಕೂಲ್, ಕುವೆಂಪು ನಗರ, ವಿಡಿಯಾ ಬಸ್ ಸ್ಟಾಪ್, ರಿಲಯನ್ಸ್ ಫ್ರೆಶ್, ಮುನಿಕೊಂಡಪ್ಪ ಲೇಔಟ್, ಅಶೋಕ್ ನಗರ, ವಿದ್ಯಾನಗರ, ಡಿಫೆನ್ಸ್ ಕಾಲೋನಿ, ಹೆಸರಘಟ್ಟ ಮುಖ್ಯ ರಸ್ತೆ, ಸಿಡೇದಹಳ್ಳಿ, ವಿಶ್ವೇಶರಯ್ಯ ಲೇಔಟ್, ರಾಯಲ್ ಎನ್‌ಕ್ಲೇವ್, ಬೈರವೇಶ್ವರ ವೃತ್ತ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕರೆಂಟ್‌ ಇರಲ್ಲ ಎನ್ನುವ ಮಾಹಿತಿ ಲಭ್ಯವಾಗಿದೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!