ಹೊಸದಿಗಂತ ಡಿಜಿಟಲ್ ಡೆಸ್ಕ್:
ಚನ್ನಪಟ್ಟಣ ಉಪಚುನಾವಣೆ ಪ್ರಚಾರದಿಂದ ದೂರ ಉಳಿದಿದ್ದ ಮಾಜಿ ಸಚಿವ ಹೆಚ್.ಡಿ.ರೇವಣ್ಣ ಕುಮಾರಸ್ವಾಮಿ ಹಾಗೂ ದೇವೇಗೌಡ ಪರವಾಗಿ ಮಾತನಾಡಿದ್ದು, ಇಬ್ಬರೂ ನನ್ನ ನಾಯಕರು ಎಂದು ಹೇಳುವ ಮೂಲಕ ಒಗ್ಗಟ್ಟು ಪ್ರದರ್ಶಿಸಿದ್ದಾರೆ.
ಮೂಳೆ ಮುರಿತಗೊಂಡಿತ್ತು. ಈಗಷ್ಟೇ ಚೇತರಿಸಿಕೊಂಡಿದ್ದೇನೆ. ಹೀಗಾಗಿ ಪ್ರಚಾರದಲ್ಲಿ ಪಾಲ್ಗೊಳ್ಳಲು ಸಾಧ್ಯವಾಗಿರಲಿಲ್ಲ. ರೇವಣ್ಣ ಹಾಗೂ ಕುಮಾರಸ್ವಾಮಿ ನಡುವೆ ಮನಸ್ತಾಪವಿದೆ ಎಂದು ಯಾರಾದರೂ ಭಾವಿಸಿದರೆ ಅದು ತಪ್ಪು.
ನನ್ನ ಕೊನೆಯ ಉಸಿರು ಇರುವವರೆಗೂ ಕುಮಾರಸ್ವಾಮಿ ನನ್ನ ನಾಯಕ ಮತ್ತು ನನ್ನ ಮಕ್ಕಳೂ ಅವರ ನಿರ್ಧಾರಗಳಿಗೆ ಬದ್ಧರಾಗಿದ್ದಾರೆ. ಪಕ್ಷವನ್ನು ಹೇಗೆ ಮೇಲೆತ್ತಬೇಕೆಂಬುದು ಎಚ್‌ಡಿ ದೇವೇಗೌಡ ಮತ್ತು ಕುಮಾರಸ್ವಾಮಿ ಅವರಿಗೆ ಗೊತ್ತಿದೆ. 1989 ರಲ್ಲಿ ಜೆಡಿಎಸ್ ಎರಡು ಸ್ಥಾನಗಳನ್ನು ಗೆದ್ದಾಗ ಹಾಗೂ ದೇವೇಗೌಡರು ಸೋಲು ಕಂಡಾಗ ಅವರ ರಾಜಕೀಯ ಜೀವನಕ್ಕೆ ಅಂತ್ಯವಾಗುತ್ತದೆ ಎಂದು ಕೆಲವರು ಭವಿಷ್ಯ ನುಡಿದಿದ್ದರು. ನಂತರ ಏನಾಯಿತು ನಿಮಗೇ ಗೊತ್ತಿದೆ ಎಂದು ಹೇಳಿದರು.
ಕಾಂಗ್ರೆಸ್ ನವರು ಸಿಪಿ ಯೋಗೇಶ್ವರ್ ರನ್ನು ಕೈಕಾಲು ಕಟ್ಟಿ ಕರೆದುಕೊಂಡು ಹೋದರು. ಸಿಪಿವೈಗೆ ಉಜ್ವಲ ಭವಿಷ್ಯ ನೀಡಲಿ. ಸಿಪಿ ಯೋಗೇಶ್ವರ್ ಒಳ್ಳೆಯ ಕೆಲಸ ಮಾಡಲಿ ಅವರನ್ನ ಮಂತ್ರಿ ಮಾಡಲಿ. ನಿಖಿಲ್ ಗೆ ಭವಿಷ್ಯವಿದೆ ಅವನಿಗೆ ವಯಸ್ಸಾಗಿಲ್ಲ. ಪ್ರಾದೇಶಿಕ ಪಕ್ಷ ಕಟ್ಟಿ ಬೆಳೆಯಲಿ ಎಂದು ಶುಭಹಾರೈಸಿದರು.