ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಧ್ಯಪ್ರದೇಶದಲ್ಲಿ ಕೊರೋನಾ ಸೋಂಕಿನ ಪ್ರಮಾಣ ಹೆಚ್ಚುತ್ತಿದ್ದು, ಈಗಾಗಲೇ ನೈಟ್ ಕರ್ಫ್ಯೂ ಜಾರಿಯಾಗಿದೆ. ಆದರೆ ಜನರು ಕೋವಿಡ್ ನಿಯಮ ಉಲ್ಲಂಘನೆ ಮಾಡುತ್ತಿದ್ದು, ಈ ಹಿನ್ನೆಲೆ ಇನ್ಮುಂದೆ ನಿಯಮ ಉಲ್ಲಂಘನೆ ಮಾಡಿದ್ದರೆ ‘Open Jails’ ಶಿಕ್ಷೆ ವಿಧಿಸಲಾಗುವುದು ಎಂದು ಗೃಹ ಸಚಿವ ಡಾ.ನರೋತ್ತಮ್ ಮಿಶ್ರಾ ಹೇಳಿದರು.
ಸದ್ಯ ರಾಜ್ಯದಲ್ಲಿ ಲಾಕ್ಡೌನ್ , ಮಾರುಕಟ್ಟೆ ಮುಚ್ಚುವ ಯಾವುದೇ ಪ್ರಸ್ತಾವನೆ ಗೃಹ ಇಲಾಖೆ ಮುಂದಿಲ್ಲ, ರಾಜ್ಯದಲ್ಲಿ ನೈಟ್ ಕರ್ಫ್ಯೂ ಜಾರಿಯಲ್ಲಿದೆ. ಮಾಸ್ಕ್ ಧರಿಸದೇ ಓಡಾಡುವವರು ಹಾಗೂ ಕೋವಿಡ್ ನಿಯಮ ಉಲ್ಲಂಘನೆ ಮಾಡುವವರ ಮೇಲೆ ಹೆಚ್ಚಿನ ದಂಡ ವಿಧಿಸಲು ಸರ್ಕಾರ ಯೋಜನೆ ರೂಪಿಸಿದೆ ಎಂದರು.
ಎಲ್ಲರು ಮಾರ್ಗಸೂಚಿಯನ್ನು ಪಾಲಿಸಬೇಕು, ಉಲ್ಲಂಘಿಸುವವರನ್ನು ತೆರೆದ ಜೈಲುಗಳಲ್ಲಿ ಇಡುವ ನಿರ್ಧಾರ ತೆಗೆದುಕೊಂಡಿದ್ದಾಗಿ ಸಚಿವರು ಹೇಳಿದರು.