ಹೊಸದಿಗಂತ ಡಿಜಿಟಲ್ ಡೆಸ್ಕ್:
ಗ್ಯಾರಂಟಿ ಯೋಜನೆ ಜಾರಿ ಮಾಡಿ ಈಗಾಗಲೇ ಹಿಮಾಚಲ ಪ್ರದೇಶದಲ್ಲಿರುವ ಕಾಂಗ್ರೆಸ್ ಸರ್ಕಾರ ಸಂಕಷ್ಟಕ್ಕೆ ಸಿಲುಕಿದೆ. ತೆಲಂಗಾಣದಲ್ಲಿರುವ ರೇವಂತ್ ರೆಡ್ಡಿ ಸರ್ಕಾರವೂ ಸಂಕಷ್ಟಕ್ಕೆ ತುತ್ತಾಗಿದ್ದು ಸರ್ಕಾರಿ ನೌಕರರಿಗೆ ಸಂಬಳ ನೀಡಲು ದುಡ್ಡಿಲ್ಲ ಎಂದು ಹೇಳಿದೆ.
ಹಲವು ಯೋಜನೆಗಳನ್ನು ಜಾರಿಗೊಳಿಸಿದ್ದರಿಂದ ಈಗ ಸರ್ಕಾರದ ಬಳಿ ಸಂಬಳ ಕೊಡುವುದಕ್ಕೂ ಹಣ ಇಲ್ಲ. ನಮ್ಮ ಸರ್ಕಾರ ಸಾಲದ ಹೊರೆ ಮತ್ತು ಇತರ ಕಾರಣಗಳಿಂದ ಹಣಕಾಸಿನ ಕೊರತೆಯನ್ನು ಎದುರಿಸುತ್ತಿದೆ. ಪರಿಸ್ಥಿತಿಯನ್ನು ನಿಭಾಯಿಸಲು ಆರ್‌ಬಿಐಯಿಂದ 4 ಸಾವಿರ ಕೋಟಿ ರೂ. ಕೈ ಸಾಲ ಪಡೆದಿದ್ದೇವೆ ಎಂದು ಸಿಎಂ ರೇವಂತ್ ರೆಡ್ಡಿ ಅವರೇ ಅಧಿಕೃತವಾಗಿ ತಿಳಿಸಿದ್ದಾರೆ.