ನಮ್ಮ ತಾಯಿಗೆ ಐಟಿ ನೋಟಿಸ್ ನೀಡಿರುವ ಬಗ್ಗೆ ತಲೆಕೆಡಿಸಿಕೊಳ್ಳುವ ಅಗತ್ಯ ಇಲ್ಲ: ಎಚ್.ಡಿ.ಕುಮಾರಸ್ವಾಮಿ

ಹೊಸದಿಗಂತ ಡಿಜಿಟಲ್ ಡೆಸ್ಕ್

ಆದಾಯ ತೆರಿಗೆ ಇಲಾಖೆ ನಮ್ಮ ತಾಯಿ ಚನ್ನಮ್ಮ ಅವರಿಗೆ ನೋಟಿಸ್ ನೀಡಿರುವ ಬಗ್ಗೆ ತಮಗೆ ಮಾಹಿತಿ ಇಲ್ಲ ಎಂದು ಮಾಜಿ ಮುಖ್ಯಮಂತ್ರಿಗಳಾದ ಎಚ್.ಡಿ.ಕುಮಾರಸ್ವಾಮಿ ಅವರು ಹೇಳಿದರು.
ವಿಧಾನಸೌಧದ ಬಳಿ ಈ ಬಗ್ಗೆ ಮಾಧ್ಯಮಗಳು ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ‘ನೋಟಿಸ್ ನೀಡಿರುವ ಬಗ್ಗೆ ತಲೆ ಕೆಡಿಸಿಕೊಳ್ಳುವ ಅಗತ್ಯ ಇಲ್ಲ.ಆತಂಕಪಡುವ ಅಗತ್ಯವೂ ಇಲ್ಲ. ನಮ್ಮ ಕುಟುಂಬದ ವ್ಯವಹಾರ ತೆರೆದ ಪುಸ್ತಕ ಎಂದರು.
ದೇವೆಗೌಡರ ರಾಜಕೀಯ ಜೀವನದಲ್ಲಿ ಹಣಕ್ಕೆ ಎಂದೂ ಮಹತ್ವ ಕೊಟ್ಟಿಲ್ಲ. ನಾವು ಸಹ ನಮ್ಮ ರಾಜಕೀಯ ಜೀವನದಲ್ಲಿ ಹಣಕ್ಕೆ ಎಂದೂ ಪ್ರಾಮುಖ್ಯತೆ ಕೊಟ್ಟವರಲ್ಲ. ನಾವು ಪರಿಶುದ್ಧವಾಗಿರಬೇಕು. ನೋಟಿಸ್ ಕೊಟ್ಟಿದ್ದಾರೆ, ಅದಕ್ಕೆ ಏನು ಉತ್ತರ ಕೊಡಬೇಕೋ ಕೊಟ್ಟರಾಯಿತು. ನನ್ನ ಸಹೋದರ ರೇವಣ್ಣ ಅವರಿಗೂ ಇದನ್ನೇ ಹೇಳಿದ್ದೇನೆ. ಇದನ್ನು ನಾವು ರಾಜಕೀಯವಾಗಿ ಬಳಸಿಕೊಳ್ಳುವ ಅವಶ್ಯಕತೆ ಇಲ್ಲ ಎಂದು ಹೇಳಿದರು.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!