ಹೊಸದಿಗಂತ ಡಿಜಿಟಲ್ ಡೆಸ್ಕ್:
ಗುರುಗ್ರಾಮ್ ನಲ್ಲಿ ನಡೆದ ಬಾಂಬ್ ಸ್ಫೋಟದ ಹಿನ್ನೆಲೆಯಲ್ಲಿ ಹರಿಯಾಣದಲ್ಲಿ ಅಪರಾಧಿಗಳಿಗೆ ಜಾಗವಿಲ್ಲ ಎಂದು ಹರಿಯಾಣ ಮುಖ್ಯಮಂತ್ರಿ ನಯಾಬ್ ಸೈನಿ ಖಡಕ್ ಎಚ್ಚರಿಕೆ ನೀಡಿದ್ದಾರೆ.
ಬಾಂಬ್ ಸ್ಫೋಟದ ಹೊಣೆಯನ್ನು ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಸಹಚರ ರೋಹಿತ್ ಗೋಡಾರಾ ವಹಿಸಿಕೊಂಡಿರುವುದಕ್ಕೆ ಹರಿಯಾಣ ಸಿಎಂ ಪ್ರತಿಕ್ರಿಯಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಪ್ರಕರಣದ ಆರೋಪಿಗಳನ್ನು ಪೊಲೀಸರು ಈಗಾಗಲೇ ಬಂಧಿಸಿದ್ದು, ಸ್ಫೋಟದ ಹಿಂದಿರುವವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಕಾನೂನು ಮತ್ತು ಸುವ್ಯವಸ್ಥೆಯೊಂದಿಗೆ ಆಡುವ ಯಾರಾದರೂ ಒಂದು ಆಸ್ಪತ್ರೆಯಲ್ಲಿ ಇರಬೇಕು, ಇಲ್ಲವಾದರೆ ಜೈಲಿನಲ್ಲಿ ಇರುತ್ತಾರೆ ಎಂದು ಕಿಡಿಕಾರಿದ್ದಾರೆ.
ಆದ್ದರಿಂದ ಗುರುಗ್ರಾಮ್‌ನ್ನು ಸ್ವಚ್ಛ ಹಾಗೂ ಸುಂದರ ಪ್ರದೇಶವನ್ನಾಗಿ ಮಾಡಲು ಸಂಬಂಧಪಟ್ಟ ಅಧಿಕಾರಿಗಳು ಕಟ್ಟುನಿಟ್ಟಿನ ಕ್ರಮಕೈಗೊಳ್ಳಬೇಕು. ಮುಂದಿನ ದಿನಗಳಲ್ಲಿ ಕ್ರಮಗಳನ್ನು ಪರಿಶೀಲಿಸಲಾಗುವುದು ಎಂದು ಸಿಎಂ ನಯಾಬ್ ಸೈನಿ ತಿಳಿಸಿದ್ದಾರೆ.