ಹೊಸದಿಗಂತ ಡಿಜಿಟಲ್ ಡೆಸ್ಕ್:
ಪ್ರಧಾನಿ ನರೇಂದ್ರ ಮೋದಿ ನಾಗ್ಪುರದ ಆರ್ಎಸ್ಎಸ್ ಕಚೇರಿಗೆ ತೆರಳಿದ್ದರು. ಈ ಬಗ್ಗೆ ಟೀಕಿಸಿರುವ ಶಿವಸೇನೆಯ ನಾಯಕ ಸಂಜಯ್ ರಾವತ್ ಹೇಳಿಕೆಗೆ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ತಿರುಗೇಟು ನೀಡಿದ್ದಾರೆ.
ಮೋದಿ ತಮ್ಮ ಉತ್ತರಾಧಿಕಾರಿಯನ್ನು ಹುಡುಕುವ ಅಗತ್ಯವಿಲ್ಲ. ಅವರು ನಮ್ಮ ನಾಯಕ ಮತ್ತು ನಮ್ಮ ನಾಯಕರಾಗಿ ಮುಂದಿನ ಅವಧಿಗೂ ಮುಂದುವರಿಯುತ್ತಾರೆ ಎಂದು ಫಡ್ನವೀಸ್ ಹೇಳಿದ್ದಾರೆ.
2029ರಲ್ಲಿ ನಾವು ಮೋದಿಯನ್ನು ಮತ್ತೆ ಪ್ರಧಾನಿಯಾಗಿ ನೋಡುತ್ತೇವೆ. ಮೋದಿ ನಮ್ಮ ತಂದೆಯಿದ್ದಂತೆ. ನಮ್ಮ ಸಂಸ್ಕೃತಿಯಲ್ಲಿ ತಂದೆ ಜೀವಂತವಾಗಿರುವಾಗ ಉತ್ತರಾಧಿಕಾರದ ಬಗ್ಗೆ ಮಾತನಾಡುವುದು ಸೂಕ್ತವಲ್ಲ. ಅದು ಮೊಘಲ್ ಸಂಸ್ಕೃತಿ. ಅದನ್ನು ಚರ್ಚಿಸಲು ಈಗ ಸಮಯ ಬಂದಿಲ್ಲ ಎಂದು ಹೇಳಿದ್ದಾರೆ.