ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೇಂದ್ರ ಸಚಿವ ಎಚ್ಡಿ ಕುಮಾರಸ್ವಾಮಿ ಅವರು ಅನಾರೋಗ್ಯದಿಂದ ಬಳಲುತ್ತಿದ್ದು, ಕಳೆದ ಕೆಲವು ದಿನಗಳ ಹಿಂದೆ ಅವರು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಪಡೆದಿದ್ದರು.
ಇದೀಗ ಪುತ್ರ ನಿಖಿಲ್ ಕುಮಾರಸ್ವಾಮಿ ಅವರು ತಂದೆಯ ಆರೋಗ್ಯದ ಬಗ್ಗೆ ಮಾಹಿತಿ ನೀಡಿ ಸ್ಪಷ್ಟನೆ ನೀಡಿದ್ದಾರೆ.
ಮಂಡ್ಯದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ನಿಖಿಲ್, ಕುಮಾರಸ್ವಾಮಿಯವರು ಆರೋಗ್ಯವಾಗಿದ್ದು, ಯಾರು ಆತಂಕ ಪಡುವುದು ಬೇಡ. ಮೇ 14ರಂದು ಕ್ಯಾಬಿನೆಟ್ ಸಭೆಯಲ್ಲಿ ಭಾಗಿಯಾಗುತ್ತಾರೆ. ಅವರ ತಂದೆ ತಾಯಿಯ ಕೆಲಸ ಕಾರ್ಯ ಶ್ರೀರಕ್ಷೆಯಾಗಿ ಆರೋಗ್ಯ ಕಾಪಾಡುತ್ತೆ. ನಾಡಿನ ಜನತೆಯ ಪ್ರೀತಿ, ಪ್ರಾರ್ಥನೆಗೆ ಕುಮಾರಸ್ವಾಮಿ ಚೆನ್ನಾಗಿದ್ದಾರೆ. ಅವರ ಆರೋಗ್ಯದಲ್ಲಿ ಯಾವುದೇ ಸಮಸ್ಯೆ ಇಲ್ಲ ಎಂದು ಸ್ಪಷ್ಟಪಡಿಸಿದರು.