Wednesday, August 10, 2022

Latest Posts

ತಮಿಳುನಾಡಿನಲ್ಲಿ ಸಾರ್ವಜನಿಕ ಗಣೇಶೋತ್ಸವಕ್ಕೆ ಬ್ರೇಕ್: ಮೂರ್ತಿ ತಯಾರಕರಿಗೆ 10 ಸಾವಿರ ರೂ. ಪರಿಹಾರ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..

ಹೊಸದಿಗಂತ ಆನ್ ಲೈನ್ ಡೆಸ್ಕ್:

ತಮಿಳುನಾಡಿನಲ್ಲಿ ಸಾರ್ವಜನಿಕ ಗಣೇಶೋತ್ಸವಕ್ಕೆ ಬ್ರೇಕ್: ಮೂರ್ತಿ ತಯಾರಕರಿಗೆ 10 ಸಾವಿರ ರೂ. ಪರಿಹಾರ

ಕೋವಿಡ್ ಮೂರನೇ ಅಲೆ ಭೀತಿ ಹಿನ್ನೆಲೆ ಸಾರ್ವಜನಿಕ ಗಣೇಶೋತ್ಸವ ನಿಷೇಧಿಸುವುದಾಗಿ ತಮಿಳುನಾಡು ಸಿಎಂ ಎಂ.ಕೆ. ಸ್ಟಾಲಿನ್ ಘೋಷಿಸಿದ್ದಾರೆ.

ಕೋವಿಡ್ ಹರಡುವಿಕೆಯನ್ನು ತಡೆಗಟ್ಟಲು ತಮಿಳುನಾಡಿನಲ್ಲಿ ಸಾರ್ವಜನಿಕ ಗಣೇಶೋತ್ಸವಕ್ಕೆ ಬ್ರೇಕ್ ಹಾಕಲಾಗಿದೆ. ಗಣೇಶ ಮೂರ್ತಿ ತಯಾರಕರಿಗೆ 10 ಸಾವಿರ ರೂ. ಪರಿಹಾರ ನೀಡುವುದಾಗಿ ಸ್ಟಾಲಿನ್ ಘೋಷಿಸಿದ್ದಾರೆ.

ಸೆ.10ರಂದು  ದೇಶಾದ್ಯಂತ ಗಣೇಶ ಚತುರ್ಥಿ ಆಚರಿಸಲಾಗುತ್ತಿದ್ದು, ತಮಿಳುನಾಡು ಸರ್ಕಾರ ಈ ಹಿನ್ನೆಲೆ ಕೆಲವು ನಿರ್ಬಂಧಗಳನ್ನು ಹೇರಿದೆ. ಅದರ ಪ್ರಕಾರ ಸಾರ್ವಜನಿಕ ಸ್ಥಳದಲ್ಲಿ ಗಣೇಶ ಮೂರ್ತಿಗಳನ್ನು ಪೂಜಿಸುವಂತಿಲ್ಲ, ಗಣೇಶ ವಿಗ್ರಹಗಳನ್ನು ಮೆರವಣಿಗೆ ಮಾಡಿ ವಿಸರ್ಜಿಸಬಾರದು ಮತ್ತು ಮನೆಗಳಲ್ಲಿ ಮಾತ್ರ ಸರಳವಾಗಿ ಗಣೇಶ ಚತುರ್ಥಿ ಆಚರಿಸಬೇಕು ಎಂದು ಸರ್ಕಾರ ಆದೇಶಿಸಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss