ರಾಜ್ಯದಲ್ಲಿ ಮುಖ್ಯಮಂತ್ರಿಗಳ ಬದಲಾವಣೆಯ ಪ್ರಶ್ನೆಯೇ ಇಲ್ಲ: ಸಚಿವ ಮುರುಗೇಶ್ ನಿರಾಣಿ

ದಿಗಂತ ವರದಿ ಮೈಸೂರು:

ರಾಜ್ಯದಲ್ಲಿ ಮುಖ್ಯಮಂತ್ರಿಗಳ ಬದಲಾವಣೆಯ ಪ್ರಶ್ನೆಯೇ ಇಲ್ಲ. ಸಿಎಂ ಬದಲಾವಣೆ ಎಂಬುದು ಕೇವಲ ಊಹಪೋಹಷ್ಟೇ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಮುರುಗೇಶ್ ನಿರಾಣಿ ಹೇಳಿದರು.
ಶುಕ್ರವಾರ ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತುಂಬಾ ಚೆನ್ನಾಗಿ ಕೆಲಸ ಮಾಡುತ್ತಿದ್ದಾರೆ. ಹಾಗಾಗಿ ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಪ್ರಶ್ನೆ ಇಲ್ಲ. ಈ ಬಗ್ಗೆ ರಾಷ್ಟಿçÃಯ ನಾಯಕರು ಸ್ಪಷ್ಟಪಡಿಸಿದ್ದಾರೆ. ಮುಂದಿನ ವಿಧಾನಸಭೆ ಚುನಾವಣೆಯಲ್ಲಿ 130 ಸ್ಥಾನ ಪಡೆದು ಮತ್ತೆ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಸಚಿವ ಸಂಪುಟ ವಿಸ್ತರಣೆ ಸಿಎಂ ಪರಮಾಧಿಕಾರ ಅದರಲ್ಲಿ ನಮ್ಮ ಪಾತ್ರ ಇಲ್ಲ ಎಂದರು. ಇದೇ ವೇಳೆ ರಾಜ್ಯದಲ್ಲಿ ಪಂಚಮಸಾಲಿಯ ಮೂರನೇ ಪೀಠ ಸ್ಥಾಪನೆಯನ್ನ ಸಮರ್ಥಿಸಿಕೊಂಡ ಅವರು, ಎರಡು ಪೀಠಗಳ ಸ್ವಾಮೀಜಿಗಳ ಒತ್ತಡ ಕಡಿಮೆ ಮಾಡಲು ಈ ಪೀಠದ ಅಗತ್ಯ ಇದೆ. ಆದರೆ ಈ ಪೀಠದ ಸ್ಥಾಪನೆ ಹಿಂದೆ ನಾನಿಲ್ಲ. ಆದರೆ ನನ್ನ ಸಂಪೂರ್ಣ ಬೆಂಬಲ ಇದಕ್ಕೆ ಇದೆ ಎಂದರು.
ಶ್ರೀ ವಚನಾನಂದ ಸ್ವಾಮೀಜಿ ಸೇರಿ ಹಲವರು ಇದರ ಬೆಂಬಲಕ್ಕೆ ಇದ್ದಾರೆ. ಪೀಠ ಸ್ಥಾಪನೆಯ ಹಿಂದೆ ದುರುದ್ದೇಶದ ಪ್ರಶ್ನೆಯೇ ಇಲ್ಲ. ಸಮುದಾಯದ ಜನಸಂಖ್ಯೆ ಹೆಚ್ಚಿರುವ ಕಾರಣ ಮೂರನೇ ಪೀಠ ಅವಶ್ಯಕತೆ ಇದೆ. ಧಾರ್ಮಿಕ ಕಾರ್ಯಕ್ರಮ ಮದುವೆ ಸಮಾರಂಭದಲ್ಲಿ ಭಾಗಿಯಾಗಲು ಮೂರನೇ ಪೀಠ ಸ್ಥಾಪನೆ ಮಾಡಲಾಗಿದೆ. ಪೀಠ ಸ್ಥಾಪನೆಯ ಯಾವುದೇ ಸಭೆ ಸಮಾರಂಭಕ್ಕೆ ನಾನು ಹೋಗಿಲ್ಲ ಎಂದು ಹೇಳಿದರು.ಮೂರನೇ ಪೀಠದ ಸ್ಥಾಪನೆ ವಿವಾದ ಸಂಬAಧ ಈ ಬಗ್ಗೆ ನಾನೇ ಖುದ್ದಾಗಿ ಸ್ವಾಮೀಜಿಯನ್ನು ಭೇಟಿ ಮಾಡುವುದಿಲ್ಲ. ಅವರು ಕರೆದರೆ ನಾನು ಹೋಗಿ ಮಾತನಾಡುತ್ತೇನೆ ಎಂದು ತಿಳಿಸಿದರು.
ಮಠಕ್ಕೆ ಕೊಟ್ಟಿರುವ ಕಾಣಿಕೆ ವಾಪಸ್ಸು ನೀಡುವ ವಿಚಾರಕ್ಕೆ ಪ್ರತಿಕ್ರಿಯಿಸಿ ನಾನು ಕಾಣಿಕೆಯನ್ನು ಸ್ವಾಮೀಜಿಗೆ ಕೊಟ್ಟಿಲ್ಲ. ನಾನು ಕೊಟ್ಟಿರುವುದು ಪೀಠಕ್ಕೆ. ಅದುನ್ನು ವಾಪಸ್ಸು ಕೇಳುವಷ್ಟು ಸಣ್ಣವನು ನಾನಲ್ಲ. ಇಂತಹ ಮನಸ್ಥಿತಿ ನನಗೆ ಇಲ್ಲ. ಬಲಗೈಯಲ್ಲಿ ಕೊಟ್ಟಿದ್ದು ಎಡಗೈಗೆ ಗೊತ್ತಾಗಬಾರದು. ಅದೇ ರೀತಿ ನಾನು ಪೀಠಕ್ಕೆ ನನ್ನ ಕೈಲಾದದನ್ನು ನೀಡಿದ್ದೇನೆ. ನಾನು ವಾಪಸ್ಸು ಕೇಳಿದ್ದೇನೆ ಎಂಬುದು ಸುಳ್ಳು. ಸ್ವಾಮೀಜಿಗೆ ಯಾರೋ ತಪುö್ಪ ಮಾಹಿತಿ ನೀಡಿದ್ದಾರೆ. ದೂರವಾಣಿ ಮೂಲಕ ಮಾತನಾಡಿದರೂ ನಾನು ಸ್ಪಷ್ಟನೆ ನೀಡುತ್ತೇನೆ ಎಂದು ಹೇಳಿದರು.
ನಿರಾಣಿ ಸಹೋದರ ಧಮ್ಮಿ ಹಾಕಿದ್ದಾರೆ ಎಂಬುದು ಸತ್ಯಕ್ಕೆ ದೂರವಾದ ಆರೋಪ. ಒಂದು ಕೆನ್ನೆಗೆ ಹೊಡೆದರೆ ಮತ್ತೊಂದು ಕೆನ್ನೆಗೆ ತೋರಿಸುವ ಗಾಂಧಿ ತತ್ವ ನಮ್ಮ ಮನೆಯ ಸಂಸ್ಕಾರ. ಇದರಲ್ಲಿ ಧಮ್ಕಿ ಹಾಕು ಪ್ರಶ್ನೆಯೇ ಇಲ್ಲ ಎಂದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!