ರಾಜ್ಯದ ಜನತೆಗೆ ಮೋಸ ಮಾಡಿರುವ ಪ್ರಶ್ನೆಯೇ ಉದ್ಭವಿಸುವುದಿಲ್ಲ: ಸಿಎಂ ಸಿದ್ದರಾಮಯ್ಯ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಕರ್ನಾಟಕ ರಾಜ್ಯದ ಜನತೆಗೆ ಮೋಸ ಮಾಡಿರುವ ಪ್ರಶ್ನೆಯೇ ಉದ್ಭವಿಸುವುದಿಲ್ಲ. ಕಾಂಗ್ರೆಸ್ ಪಕ್ಷ ನೀಡಿರುವ ಎಲ್ಲ ಪಂಚ ಗ್ಯಾರಂಟಿಗಳನ್ನು 5 ವರ್ಷಗಳವರೆಗೆ ಅನುಷ್ಠಾನಗೊಳಿಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಭಾನುವಾರ ತೆಲಂಗಾಣಕ್ಕೆ ಭೇಟಿ ನೀಡಿದ ಸಿಎಂ ಸಿದ್ದರಾಮಯ್ಯ ಕಾಂಗ್ರೆಸ್ ಪಕ್ಷದ ಪ್ರಚಾರ ಕಾರ್ಯಕ್ರಮದಲ್ಲಿ ಭಾಗವಹಿಸಿ ನಂತರ ಮಾತನಾಡಿದರು.

ಕರ್ನಾಟಕ ರಾಜ್ಯದಲ್ಲಿ ನಾವು ಅಧಿಕಾರ ಸ್ವೀಕರಿಸಿದ ಮೇ 20ರ ದಿನದಂದೇ ಕಾಂಗ್ರೆಸ್ ನೀಡಿದ್ದ 5 ಗ್ಯಾರಂಟಿಗಳ ಅನುಷ್ಠಾನಗೊಳಿಸಲು ಸಂಪುಟ ಸಭೆ ನಡೆಸಿ ತೀರ್ಮಾನಿಸಿದ್ದೇವೆ. ಸಂಬಂಧಪಟ್ಟ ಸರ್ಕಾರಿ ಆದೇಶಗಳನ್ನು ಅಂದೇ ನೀಡಲಾಯಿತು. ತೆಲಂಗಾಣದ ಮುಖ್ಯಮಂತ್ರಿಗಳು ಕರ್ನಾಟಕದಲ್ಲಿ ಗ್ಯಾರಂಟಿ ಯೋಜನೆಗಳನ್ನು ಸರಿಯಾಗಿ ಜಾರಿ ಮಾಡಲಾಗುತ್ತಿಲ್ಲ ಎಂಬ ಆರೋಪಗಳು ಚುನಾವಣಾ ಪ್ರೇರಿತ ಮತ್ತು ಸತ್ಯಕ್ಕೆ ದೂರವಾಗಿದೆ ಎಂದರು.

ನಾವು ಅಧಿಕಾರ ಸ್ವೀಕರಿಸಿದ ಮೇ 20ರ ದಿನದಂದೇ ಕಾಂಗ್ರೆಸ್ ನೀಡಿದ್ದ 5 ಗ್ಯಾರಂಟಿಗಳ ಅನುಷ್ಠಾನಗೊಳಿಸಲು ಸಂಪುಟ ಸಭೆ ನಡೆಸಿ ತೀರ್ಮಾನಿಸಿದ್ದೇವೆ. ಸಂಬಂಧಪಟ್ಟ ಸರ್ಕಾರಿ ಆದೇಶಗಳನ್ನು ಅಂದೇ ನೀಡಲಾಯಿತು .

2022-23ನೇ ಸಾಲಿನಲ್ಲಿ ಪದವಿ ಪಡೆದ ಯುವಜನರಿಗೆ 2 ವರ್ಷಗಳವರೆಗೆ ಮಾಸಿಕ 3000 ರೂ. ಹಾಗೂ 2 ವರ್ಷದವರಗೆ ಡಿಪ್ಲೊಮಾ ಮಾಡಿದ ಯುವಜನರಿಗೆ ಮಾಸಿಕ 1500 ರೂ.ಗಳನ್ನು ನೀಡಲಾಗುತ್ತೆ, . ಇದಲ್ಲದೇ ಯುವಜನರಿಗೆ ಕೌಶಲ್ಯಾಭಿವೃದ್ಧಿ ತರಬೇತಿಯನ್ನೂ ನೀಡಲಾಗುತ್ತದೆ ಎಂದು ಸಿದ್ದರಾಮಯ್ಯ ತಿಳಿಸಿದರು

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!