ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವುದಿಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ.
ಡಿಕೆಶಿ ಶಿವಕುಮಾರ್ ಅವರು ಇಂದು ಸುದ್ದಿಗಾರರೊಂದಿಗೆ ಮಾತನಾಡುತ್ತಾ, ಕಾಂಗ್ರೆಸ್ ಪಕ್ಷದ ಅಧ್ಯಕ್ಷನಾಗಿ ಹೇಳುತ್ತಿದ್ದೇನೆ ಸಿದ್ದರಾಮಯ್ಯ ಅವರು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವುದಿಲ್ಲ. ಇದು ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳ ಕುತಂತ್ರ. ಸಿಎಂ ರಾಜೀನಾಮೆ ಕೊಡುವ ಪ್ರಸ್ತಾವ ಬರಲ್ಲ ಎಂದು ಖಡಕ್ ಮಾತುಗಳನಾಡಿದ್ದಾರೆ.