ಪಹಲ್ಗಾಮ್ ದಾಳಿಕೋರರನ್ನು ಸುಮ್ಮನೆ ಬಿಡುವ ಪ್ರಶ್ನೆಯೇ ಇಲ್ಲ: ಗುಡುಗಿದ ಕೇಂದ್ರ ಗೃಹ ಸಚಿವ ಅಮಿತ್ ಶಾ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ದಾಳಿ ನಡೆಸಿದ ಭಯೋತ್ಪಾದಕರನ್ನು ಯಾವುದೇ ಕಾರಣಕ್ಕೂ ಸುಮ್ಮನೆ ಬಿಡುವ ಪ್ರಶ್ನೆಯೇ ಇಲ್ಲ ಎಂದು ಕೇಂದ್ರ ಗೃಹಸಚಿವ ಅಮಿತ್ ಶಾ ಗುಡುಗಿದ್ದಾರೆ.

ಘಟನೆಯನ್ನು ತೀವ್ರವಾಗಿ ಖಂಡಿಸಿರುವ ಅವರು, ಈ ಬಗ್ಗೆ ಪ್ರಧಾನಿ ಜೊತೆ ಮಾಹಿತಿ ಹಂಚಿಕೊಳ್ಳಲಾಗಿದೆ. ಸಂಬಂಧಪಟ್ಟ ಇಲಾಖೆ ಅಧಿಕಾರಿಗಳೊಂದಿಗೆ ವರ್ಚುವಲ್ ಸಭೆ ನಡೆಸಿ ಚರ್ಚಿಸಲಾಗಿದೆ. ಜೊತೆಗೆ ಅಲ್ಲಿನ ಸ್ಥಿತಿಗತಿ ಅರಿಯಲು ಖುದ್ದಾಗಿ ಶ್ರೀನಗರಕ್ಕೆ ತೆರಳುತ್ತಿದ್ದೇನೆ ಎಂದು ಅವರು ಸಾಮಾಜಿಕ ಜಾಲತಾಣ ಎಕ್ಸ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!