ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಾಂಗ್ರೆಸ್‌ನಲ್ಲಿನ ಹಗರಣಗಳ ವಿರುದ್ಧದ ಹೋರಾಟ ಯಶಸ್ವಿಯಾಗಬೇಕು. ನಮ್ಮ ಕಾರ್ಯಕರ್ತರು ಪಾದಯಾತ್ರೆಗೆ ಬೇಕಾದ ಎಲ್ಲವನ್ನೂ ಮಾಡಿದ್ದಾರೆ. ಪಾದಯಾತ್ರೆಯ ಯಶಸ್ಸಿಗೆ ಮೈಸೂರಿನ ಜನತೆಯ ಬೆಂಬಲವೂ ಬೇಕು. ಈ ಹೋರಾಟ ಯಾರ ವಿರುದ್ಧವೂ ಅಲ್ಲ. ಸಿದ್ದರಾಮಯ್ಯ ಸರಕಾರ ಅಹಿಂದ ಹೆಸರಿನಲ್ಲಿ ಅಧಿಕಾರಕ್ಕೆ ಬಂದಿದೆ. ಆದರೆ ಅವರು ಹಿಂದುಳಿದ ವರ್ಗಗಳಿಗೆ ಅನ್ಯಾಯ ಮಾಡಿದ್ದಾರೆ ಎಂದು ವಿಜಯೇಂದ್ರ ಹೇಳಿದರು.
ಪಾದಯಾತ್ರೆಗೆ ಪ್ರತಿಕ್ರಿಯೆಯಾಗಿ ಕಾಂಗ್ರೆಸ್ ಸಮಾವೇಶ ನಡೆಸಬೇಕೆ ಎಂಬ ಕುರಿತು ಮಾತನಾಡಿದ ಅವರು, ಪ್ರತಿಪಕ್ಷಗಳ ಆರೋಪ ನಿಜ ಎಂದು ಒಪ್ಪಿಕೊಂಡಿದ್ದಾರೆ. ಈ ಬೆದರಿಕೆ ಮತ್ತು ಈ ಕುತಂತ್ರಕ್ಕೆ ನಾವು ಮಣಿಯುವುದಿಲ್ಲ. ಹೋರಾಟ ಮಣಿಸುವ ಯಾವುದೇ ದುರುದ್ದೇಶ ನಡೆಯಲ್ಲ ಎಂದು ಹೇಳಿದ್ದಾರೆ.