April 8, 2026
Wednesday, April 8, 2026
spot_img

ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆ ಇಲ್ಲ: ವದಂತಿಗಳಿಗೆ ಸರಕಾರದಿಂದ ಸ್ಪಷ್ಟೋಕ್ತಿ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮಧ್ಯಪ್ರಾಚ್ಯದಲ್ಲಿನ ಸಂಘರ್ಷದಿಂದಾಗಿ ರಾಜ್ಯದಲ್ಲೂ ಗ್ಯಾಸ್ ಕೊರತೆ ಉಂಟಾಗಿದ್ದು, ಅದರಲ್ಲೂ ಆಟೋ ಚಾಲಕರಿಗೆ ಗ್ಯಾಸ್​ ಸಿಗದೆ ಹೈರಾಣರಾಗಿದ್ದು, ದಿನವಿಡಿ ಬಂಕ್​ಗಳ ಬಳಿ ಗಂಟೆಗಟ್ಟಲೇ ಕಾಯುವಂತ ಸ್ಥಿತಿ ನಿರ್ಮಾಣವಾಗಿದೆ. ಇದರ ಜೊತೆಗೆ ಆಟೋ ಗ್ಯಾಸ್ ಕೊರತೆ ಬಗ್ಗೆ ವದಂತಿಗಳು ಹರಡುತ್ತಿದ್ದು, ಈ ಬೆನ್ನಲ್ಲೇ ಸ್ಪಷ್ಟನೆ ನೀಡಿರುವ ರಾಜ್ಯ ಸರ್ಕಾರ, ಗ್ಯಾಸ್ ಸರಬರಾಜಿನಲ್ಲಿ ವ್ಯತ್ಯಾಸ ಕಂಡಿರಬಹುದು. ಆದರೆ ರಾಜ್ಯದಲ್ಲಿ ಯಾವುದೇ ರೀತಿಯ ಆಟೋ ಗ್ಯಾಸ್ ಕೊರತೆ ಇಲ್ಲ ಎಂದು ಸ್ಪಷ್ಟನೆ ನೀಡಿದೆ.

ಈ ಕುರಿತು ಆಹಾರ ಇಲಾಖೆ ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡಿದ್ದು , ರಾಜ್ಯದಲ್ಲಿ ಸರಬರಾಜಿನಲ್ಲಿ ವ್ಯತ್ಯಾಸ ಕಂಡಿರಬಹುದು. ಆದರೆ ಯಾವುದೇ ರೀತಿಯ ಅಭಾವ ಉಂಟಾಗಿಲ್ಲ. ಆಟೋ ಚಾಲಕರು ಆತಂಕಪಡುವ ಅಗತ್ಯವಿಲ್ಲ ಎಂದು ಸ್ಪಷ್ಟಪಡಿಸಿದೆ.

ಈಗಾಗಲೇ ರಾಜ್ಯದಲ್ಲಿ ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳಾದ ಇಂಡಿಯನ್ ಆಯಿಲ್, ಭಾರತ್ ಪೆಟ್ರೋಲಿಯಂ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಂಪನಿಗಳಿಂದ ಗ್ಯಾಸ್​ ಪೂರೈಕೆ ಮಾಡಲಾಗುತ್ತಿದೆ. ಪ್ರತಿದಿನ ಸರಾಸರಿ 83.58 ಮೆಟ್ರಿಕ್ ಟನ್ ಗ್ಯಾಸ್ ಅನ್ನುಮಾರಾಟ ಮಳಿಗೆಗಳಿಗೆ ಪೂರೈಸಲಾಗುತ್ತಿದೆ ಎಂದು ತಿಳಿಸಿದೆ. ಈ ಹಿಂದೆ ಸರಾಸರಿ 56.67 ಮೆಟ್ರಿಕ್ ಟನ್ ಆಟೋ ಗ್ಯಾಸ್ ಅನ್ನು ಸರಬರಾಜು ಮಾಡುತ್ತಿದ್ದವು. ಆದರೆ ಇದೀಗ ಬೇಡಿಕೆ ಹೆಚ್ಚಾದ ಕಾರಣ ಅಧಿಕ ಪ್ರಮಾಣದಲ್ಲಿ ಪೂರೈಸಲಾಗುತ್ತಿದೆ ಎಂದು ತಿಳಿಸಿದೆ.

ಪ್ರಿಲ್ 2 ರಿಂದ ಏಪ್ರಿಲ್ 6 ರವರೆಗೆ ಯಾವುದೇ ತೊಂದರೆ ಇಲ್ಲದೇ ವ್ಯವಸ್ಥಿತವಾಗಿ ಗ್ಯಾಸ್ ಪೂರೈಕೆಯಾಗಿದ್ದು, ಏಪ್ರಿಲ್ 2 ರಂದು 87.78 ಮೆಟ್ರಿಕ್ ಟನ್, ಏಪ್ರಿಲ್ 3ರಂದು 86.05 ಮೆಟ್ರಿಕ್ ಟನ್,ಏಪ್ರಿಲ್ 4ರಂದು 84.80 ಮೆಟ್ರಿಕ್ ಟನ್,ಏಪ್ರಿಲ್ 5ರಂದು 94.11 ಮೆಟ್ರಿಕ್ ಟನ್ , ಏಪ್ರಿಲ್ 6ರಂದು 83.58 ಮೆಟ್ರಿಕ್ ಟನ್ ​ವರೆಗೂ ಪೂರೈಕೆ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.

ಹಾಗಾಗಿ ರಾಜ್ಯದ ಆಟೋ ಮಾಲೀಕರು ಮತ್ತು ಚಾಲಕರು ಯಾವುದೇ ರೀತಿಯ ವದಂತಿಗಳಿಗೆ ಕಿವಿ ಕೊಡದೇ ಸಹಕರಿಸುವಂತೆ ರಾಜ್ಯ ಸರ್ಕಾರ ಮನವಿ ಮಾಡಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !