ಹೊಸದಿಗಂತ ಡಿಜಿಟಲ್ ಡೆಸ್ಕ್:
ಯಾದಗಿರಿ ಜಿಲ್ಲೆಯಲ್ಲಿ ಗೃಹ ಬಳಕೆಯ ಎಲ್‌ಪಿಜಿ ಅಡುಗೆ ಅನಿಲ ಸಿಲಿಂಡರ್‌ಗಳು ಸಾಕಷ್ಟು ಪ್ರಮಾಣದಲ್ಲಿ ಲಭ್ಯವಿದ್ದು, ಗ್ರಾಹಕರು ಯಾವುದೇ ರೀತಿಯ ಆತಂಕಪಡುವ ಅಗತ್ಯವಿಲ್ಲ ಎಂದು ಜಿಲ್ಲಾಧಿಕಾರಿ ಹರ್ಷಲ್ ಭೋಯರ್ ಸ್ಪಷ್ಟಪಡಿಸಿದ್ದಾರೆ.
ಸಾಮಾಜಿಕ ಜಾಲತಾಣಗಳಲ್ಲಿ ಅಡುಗೆ ಅನಿಲದ ಕೊರತೆ ಕುರಿತು ಹರಿದಾಡುತ್ತಿರುವ ವದಂತಿಗಳಿಗೆ ಸಾರ್ವಜನಿಕರು ಕಿವಿಗೊಡಬಾರದು ಎಂದು ಅವರು ತಿಳಿಸಿದ್ದಾರೆ. ಜಿಲ್ಲೆಯಲ್ಲಿ ಸಿಲಿಂಡರ್‌ಗಳ ಪೂರೈಕೆ ವ್ಯವಸ್ಥಿತವಾಗಿ ನಡೆಯುತ್ತಿದ್ದು, ಗ್ರಾಹಕರು ಅನಾವಶ್ಯಕವಾಗಿ ಹೆಚ್ಚುವರಿ ಸಿಲಿಂಡರ್‌ಗಳನ್ನು ಸಂಗ್ರಹಿಸಿಟ್ಟುಕೊಳ್ಳಬಾರದು ಎಂದು ಅವರು ಇದೇ ಸಂದರ್ಭದಲ್ಲಿ ಮನವಿ ಮಾಡಿದ್ದಾರೆ. ವದಂತಿಗಳನ್ನು ಹಬ್ಬಿಸುವವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಡಳಿತ ಎಚ್ಚರಿಸಿದೆ.
ಬಾಗಲಕೋಟೆಯಲ್ಲೂ ಆತಂಕ ಬೇಡ ಎಂದ ಜಿಲ್ಲಾಧಿಕಾರಿ
ಬಾಗಲಕೋಟೆ ಜಿಲ್ಲೆಯಲ್ಲಿ ಕೇಂದ್ರ ಸರ್ಕಾರದ ಮಾರ್ಗಸೂಚಿಯ ಅನ್ವಯ ಎಲ್‌ಪಿಜಿ ಗ್ಯಾಸ್ ವಿತರಣೆಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಜಾನ್ ಎಂ. ಸಂಗಪ್ಪ ತಿಳಿಸಿದ್ದಾರೆ.
ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಎಲ್‌ಪಿಜಿ ವಿತರಕರ ಸಂಘದ ಪದಾಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಗೃಹ ಬಳಕೆಯ ಎಲ್‌ಪಿಜಿ ಸಿಲಿಂಡರ್‌ಗಳ ಸಮರ್ಪಕ ಸಂಗ್ರಹವಿದೆ ಮತ್ತು ಪೂರೈಕೆ ಕಾರ್ಯವು ಸರಾಗವಾಗಿ ನಡೆಯುತ್ತಿದೆ ಎಂದು ಸ್ಪಷ್ಟಪಡಿಸಿದರು. ಸಾರ್ವಜನಿಕರು ಸಿಲಿಂಡರ್‌ಗಳ ಕೊರತೆಯ ಬಗ್ಗೆ ಯಾವುದೇ ರೀತಿಯ ಆತಂಕಕ್ಕೆ ಒಳಗಾಗಬಾರದು. ತಮಗೆ ಅಗತ್ಯವಿರುವಷ್ಟು ಸಿಲಿಂಡರ್‌ಗಳನ್ನು ನಿಯಮಾನುಸಾರ ಪಡೆಯಬೇಕು ಎಂದು ಅವರು ಈ ಸಂದರ್ಭದಲ್ಲಿ ಮನವಿ ಮಾಡಿದ್ದಾರೆ.



