July 28, 2026
Tuesday, July 28, 2026
spot_img

ಭಾರತದಲ್ಲಿ ಪೆಟ್ರೋಲ್- ಡೀಸೆಲ್ ಕೊರತೆ ಇಲ್ಲ: ವದಂತಿಗಳಿಗೆ ತೆರೆ ಎಳೆದ ಐಒಸಿಎಲ್!

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಮಧ್ಯಪ್ರಾಚ್ಯದಲ್ಲಿನ ಸಂಘರ್ಷದಿಂದ ಜಾಗತಿಕ ಮಟ್ಟದಲ್ಲಿ ತೈಲ ಕೊರತೆ ಉಂಟಾಗಿದೆ. ಆದರೆ ಭಾರತದಲ್ಲಿ ಯಾವುದೇ ರೀತಿಯಲ್ಲಿ ಇಂಧನದ ಅಭಾವ ಉಂಟಾಗಲಿಲ್ಲ ಎಂದು ಭಾರತೀಯ ತೈಲ ನಿಗಮ (ಐಒಸಿಎಲ್ ) ತಿಳಿಸಿದೆ.

ಹಾರ್ಮುಜ್ ಜಲಸಂಧಿಯಲ್ಲಿ ಹಡಗುಗಳ ಸಂಚಾರಕ್ಕೆ ಅಡೆತಡೆಗಳಿದ್ದರೂ, ಭಾರತದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಪೂರೈಕೆಯಲ್ಲಿ ಯಾವುದೇ ವ್ಯತ್ಯಯವಾಗುವುದಿಲ್ಲ ಎಂದು ಜನತೆಗೆ ಭರವಸೆ ನೀಡಿದೆ.

ಮಧ್ಯಪ್ರಾಚ್ಯದಲ್ಲಿನ ಬಿಕ್ಕಟ್ಟಿನಿಂದಾಗಿ ಜಾಗತಿಕವಾಗಿ ತೈಲ ಪೂರೈಕೆಯಲ್ಲಿ ಸಮಸ್ಯೆ ಎದುರಾಗಿದ್ದು, ಇದು ಭಾರತದಲ್ಲೂ ಮತ್ತಷ್ಟು ಸಂಕಷ್ಟ ತರಲಿದೆ ಎಂಬ ವದಂತಿಗಳು ಹಬ್ಬಿದ್ದವು. ಈ ಹಿನ್ನೆಲೆ ಐಒಸಿಎಲ್ ಸ್ಪಷ್ಟನೆ ನೀಡುವ ಮೂಲಕ ಗೊಂದಲ ದೂರ ಮಾಡಿದೆ. ನಮ್ಮ ಪೆಟ್ರೋಲ್ ಪಂಪ್‌ಗಳಲ್ಲಿ ಯಾವುದೇ ರೀತಿಯ ಇಂಧನದ ಕೊರತೆಯಿಲ್ಲ. ಗ್ರಾಹಕರು ಯಾವುದೇ ವದಂತಿಗಳಿಗೆ ಕಿವಿಗೊಡಬಾರದು ಮತ್ತು ಮುಗಿಬಿದ್ದು ಇಂಧನ ಖರೀದಿಗೆ ಮುಂದಾಗಬಾರದು ಎಂದು ಮನವಿ ಮಾಡಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !