March 31, 2026
Tuesday, March 31, 2026
spot_img

ದೇಶಕ್ಕೂ ಕಾಡಿತಾ ಪೆಟ್ರೋಲ್, ಡೀಸೆಲ್ ಕೊರತೆ? ಇಂಧನ ಬಿಕ್ಕಟ್ಟು ಕೇಂದ್ರಕ್ಕೆ ತಂದಿತಾ ಇಕ್ಕಟ್ಟು?

ಹೊಸದಿಗಂತ ಡಿಜಿಟಲ್ ಡೆಸ್ಕ್:

ಇಸ್ರೇಲ್, ಅಮೆರಿಕ ಮತ್ತು ಇರಾನ್ ನಡುವಿನ ಸಂಘರ್ಷದ ಹಿನ್ನೆಲೆಯಲ್ಲಿ ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಕೊರತೆ ಉಂಟಾಗಬಹುದು ಎಂಬ ವದಂತಿಗಳನ್ನು ಕೇಂದ್ರ ಸರ್ಕಾರ ತಳ್ಳಿಹಾಕಿದೆ. ದೇಶದಲ್ಲಿ ಇಂಧನ ಪೂರೈಕೆ ಸಮರ್ಪಕವಾಗಿದ್ದು, ಆತಂಕ ಪಡುವ ಅಗತ್ಯವಿಲ್ಲ ಎಂದು ಸರ್ಕಾರ ಸ್ಪಷ್ಟಪಡಿಸಿದೆ.

ಕೇಂದ್ರದ ಮಾಹಿತಿ ಪ್ರಕಾರ, ಭಾರತದಲ್ಲಿ 250 ಮಿಲಿಯನ್ ಬ್ಯಾರೆಲ್‌ಗಿಂತ ಹೆಚ್ಚು ಕಚ್ಚಾ ತೈಲ ಸಂಗ್ರಹವಿದ್ದು, ಸುಮಾರು 50 ದಿನಗಳ ಅಗತ್ಯಕ್ಕೆ ಸಾಕಾಗುವಷ್ಟು ಇಂಧನ ಲಭ್ಯವಿದೆ. ಕಳೆದ 12 ವರ್ಷಗಳಲ್ಲಿ ದೇಶದ ಯಾವುದೇ ಪೆಟ್ರೋಲ್ ಬಂಕ್ ಖಾಲಿಯಾಗಿಲ್ಲ ಎಂದು ಸರ್ಕಾರ ತಿಳಿಸಿದೆ.

ಇದನ್ನೂ ಓದಿ:

ಭಾರತವು 40ಕ್ಕೂ ಹೆಚ್ಚು ದೇಶಗಳಿಂದ ಕಚ್ಚಾ ತೈಲವನ್ನು ಆಮದು ಮಾಡಿಕೊಳ್ಳುತ್ತಿದೆ. ಜೊತೆಗೆ ದೇಶೀಯ ಉತ್ಪಾದನೆಯೂ ಇಂಧನ ಪೂರೈಕೆಗೆ ನೆರವಾಗುತ್ತಿದೆ. ಇದರಿಂದ ದೇಶದ ಇಂಧನ ಕ್ಷೇತ್ರ ಸ್ಥಿರವಾಗಿದ್ದು, ಯಾವುದೇ ಬಿಕ್ಕಟ್ಟು ಎದುರಾಗುವ ಸಾಧ್ಯತೆ ಕಡಿಮೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದಲ್ಲದೆ ಭಾರತದ ಒಟ್ಟು ತೈಲ ಆಮದಿನಲ್ಲಿ ಕೇವಲ 40 ಶೇಕಡಾ ಮಾತ್ರ ಹಾರ್ಮುಜ್ ಜಲಸಂಧಿಯ ಮೂಲಕ ಬರುತ್ತದೆ. ಉಳಿದ 60 ಶೇಕಡಾ ಇತರ ಅಂತಾರಾಷ್ಟ್ರೀಯ ಮಾರ್ಗಗಳ ಮೂಲಕ ಸಾಗಿಸಲಾಗುತ್ತದೆ.

ರಷ್ಯಾದಿಂದಲೂ ಭಾರತ ಕಚ್ಚಾ ತೈಲವನ್ನು ಆಮದು ಮಾಡಿಕೊಳ್ಳುತ್ತಿರುವುದರಿಂದ ಇಂಧನ ಪೂರೈಕೆಯಲ್ಲಿ ಯಾವುದೇ ವ್ಯತ್ಯಯ ಉಂಟಾಗುವುದಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !