Wednesday, August 17, 2022

Latest Posts

ಲಸಿಕೆ ಪಡೆಯುವುದರಿಂದ ಯಾವುದೇ ಅಡ್ಡಪರಿಣಾಮವಿಲ್ಲ: ಜಿಲ್ಲಾಧಿಕಾರಿ

ಹೊಸ ದಿಗಂತ ವರದಿ,ಮಂಡ್ಯ:

ಕೋವಿಶೀಲ್ಡ್ ಲಸಿಕೆ ಪಡೆಯುವುದರಿಂದ ಯಾವುದೇ ಅಡ್ಡಪರಿಣಾಮವೂ ಆಗುವುದಿಲ್ಲ . ಸಾರ್ವಜನಿಕರು ನಿರ್ಭೀತಿಯಿಂದ ಲಸಿಕೆ ಪಡೆಯುವಂತೆ ಜಿಲ್ಲಾಧಿಕಾರಿ ಎಸ್. ಅಶ್ವಥಿ ಕರೆ ನೀಡಿದರು.
ಮಂಡ್ಯ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ಮಿಮ್ಸ್) ಆಸ್ಪತ್ರೆಯಲ್ಲಿ ಎರಡನೇ ಹಂತದ ಕೋವಿಡ್ ಲಸಿಕೆ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಮೊದಲನೆ ಹಂತದಲ್ಲಿ ಆರೋಗ್ಯ ಇಲಾಖೆಯ ಸಿಬ್ಬಂದಿಗಳಿಗೆ ಹಾಗೂ 2ನೇ ಹಂತದಲ್ಲಿ ಇತರೆ ಇಲಾಖೆಗಳ ್ರೆಂಟ್‌ಲೈನ್ ಸಿಬ್ಬಂದಿಗಳಿಗೆ ಈಗಾಗಲೇ ಕೋವಿಡ್ ಲಸಿಕೆ ಅಭಿಯಾನ ಆರಂಭವಾಗಿದ್ದುಘಿ, ಈ ಹಂತದಲ್ಲಿ ಜನಸಾಮಾನ್ಯರಿಗೆ ಲಸಿಕೆ ಲಭ್ಯವಾಗಲಿದೆ ಎಂದು ಹೇಳಿದರು.
45 ರಿಂದ 59 ವರ್ಷ ವಯಸ್ಸಿನ ಹಿರಿಯ ನಾಗರೀಕರಿಗೆ ಮೂರನೇ ಹಂತದಲ್ಲಿ ಲಸಿಕಾ ಕಾರ‌್ಯಕ್ರಮ ಹಮ್ಮಿಕೊಂಡಿದ್ದುಘಿ, ಮಾ. 1 ರಿಂದ ಮಾರ್ಚ್ 4 ರವರೆಗೆ ಜಿಲ್ಲೆಯಾದ್ಯಂತ 9 ಕೆಂದ್ರಗಳಲ್ಲಿ ಅಂದರೆ ಮಂಡ್ಯ ವೈದ್ಯಕೀಯ ವಿಜ್ಞಾನ ಸಂಸ್ಥೆ, ಎಲ್ಲಾ ಆರು ತಾಲೂಕು ಕೇಂದ್ರಗಳು, ಎರಡು ಖಾಸಗೀ ಕೇಂದ್ರಗಳಾದ ಆದಿಚುಂಚನಗಿರಿ ವೈದ್ಯಕೀಯ ಕಾಲೇಜು, ಸಾಂಜೋ ಆಸ್ಪತ್ರೆಯಲ್ಲಿ ಮಧ್ಯಾಹ್ನ 12ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಲಸಿಕಾ ಕಾರ‌್ಯ ನಡೆಯಲಿದೆ ಎಂದು ವಿವರಿಸಿದರು.
ಮಾ. 6ರಿಂದ ಜಿಲ್ಲೆಯಲ್ಲಿ ಗುರುತಿಸಿರುವ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಲಸಿಕಾ ಅಭಿಯಾನ ನಡೆಯಲಿದೆ. ಮೊದಲನೇ ಡೋಸ್ ಪಡೆದ 29 ರಿಂದ 42 ದಿನಗಳ ಒಳಗೆ 2ನೇ ಡೋಸ್ ಲಸಿಕೆಯನ್ನು ಪಡೆಯಬೇಕಾಗಿರುತ್ತದೆ ಎಂದು ತಿಳಿಸಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss

error: Content is protected !!