ಹೊಸದಿಗಂತ ಡಿಜಿಟಲ್ ಡೆಸ್ಕ್:
ನಟಿ ರಶ್ಮಿಕಾ ಮಂದಣ್ಣ ಡೀಪ್‌ಫೇಕ್ ವಿಡಿಯೋ ಮಾಡಿದವರ ಬಗ್ಗೆ ಸೂಕ್ತ ತನಿಖೆಗೆ ದೆಹಲಿ ಪೊಲೀಸ್ ಮುಂದಾಗಿದ್ದಾರೆ.
ಎಐ ಡೀಪ್ ಫೇಕ್ ತಂತ್ರಜ್ಞಾನ ಬಳಸಿ ರಶ್ಮಿಕಾ ಮಂದಣ್ಣ ಅವರ ವಿಡಿಯೋ ಮಾಡಲಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಸಂಚಲನ ಮೂಡಿಸಿತ್ತು. ಇಡೀ ಸಿನಿರಂಗವೇ ರಶ್ಮಿಕಾ ಸಪೋರ್ಟ್‌ಗೆ ನಿಂತಿದ್ದು, ಇಂಥವರನ್ನು ಸುಮ್ಮನೆ ಬಿಡಬಾರದು ಎಂದು ಹೇಳಿತ್ತು.
ಇದೀಗ ಕಿಡಿಗೇಡಿಗಳ ವಿರುದ್ಧ ದೆಹಲಿ ಪೊಲೀಸರು ಎಫ್‌ಐಆರ್ ದಾಖಲಿಸಿದ್ದು, ತನಿಖೆ ಆರಂಭಿಸಿದ್ದಾರೆ.