ಹೊಸದಿಗಂತ ಡಿಜಿಟಲ್ ಡೆಸ್ಕ್:
ಇತ್ತೀಚೆಗಿನ ಲೋಕಸಭೆ ಚುನಾವಣೆಯಲ್ಲಿ ಭಾರತದ ಗಮನ ಸೆಳೆದಿದ್ದ ಮಂಡ್ಯ ಈ ಬಾರಿ ಕುತೂಹಲಕಾರಿ ತಾಣವಾಗಿ ಪರಿವರ್ತನೆಗೊಂಡಿದೆ. ಒಂದೆಡೆ ದಳಪತಿಗಳು ಮಂಡ್ಯವನ್ನು ಮತ್ತೆ ತಮ್ಮ ಹಿಡಿತಕ್ಕೆ ತರಲು ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡರೆ, ಮತ್ತೊಂದೆಡೆ ಸ್ವಾಭಿಮಾನಿ ಸಂಸದೆ ಸುಮಲತಾ ಮಂಡ್ಯ ಬಿಟ್ಟುಕೊಡೋ ಮಾತೇ ಇಲ್ಲ ಎಂದು ಪಣ ತೊಟ್ಟರು.
ಸುಮಲತಾ ಅಂಬರೀಶ್ ವ್ಯಕ್ತಪಡಿಸಿದ ಮಾತು, ಪ್ರಮಾಣ, ಸ್ವಾಭಿಮಾನದ ಹೆಸರಿನಲ್ಲಿ ಕಳೆದ ಲೋಕಸಭೆ ಚುನಾವಣೆಯಲ್ಲಿ ಸುಮಲತಾ ದಳಪತಿಗಳ ವಿರುದ್ಧ ಭರ್ಜರಿ ಗೆಲುವು ಸಾಧಿಸಿದ್ದಾರೆ.
ಸುಮಲತಾ ಈಗ ಮತ್ತೊಮ್ಮೆ ಶತಾಯಗತಾಯ ಮಂಡ್ಯದಿಂದ ಸ್ಪರ್ಧಿಸಲು ತೀರ್ಮಾನಿಸಿದ್ದು, ಅದಕ್ಕಾಗಿ ದೆಹಲಿ ಮಟ್ಟದಲ್ಲಿ ಭರ್ಜರಿ ಪ್ರಚಾರ ನಡೆಸುತ್ತಿದ್ದಾರೆ. ಮಂಡ್ಯ ಬಿಡುವ ಮಾತೇ ಇಲ್ಲ ಎಂಬ ಸಂದೇಶ ರವಾನಿಸಲು ಬಿಜೆಪಿ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿದ್ದಾರೆ.