ಬೆಂಗಳೂರಿನ ಅಪಾರ್ಟ್‌ಮೆಂಟ್‌ಗಳಲ್ಲಿ ನೀರಿಲ್ಲ, ಬಾಡಿಗೆ ಕಡಿಮೆ ಮಾಡಿ ಎಂದು ಪಟ್ಟು ಹಿಡಿದ ನಿವಾಸಿಗಳು!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ರಾಜಧಾನಿ ಬೆಂಗಳೂರಿನಲ್ಲಿ ನೀರಿಗೆ ಹಾಹಾಕಾರ ಎದ್ದಿದ್ದು, ಅಪಾರ್ಟ್‌ಮೆಂಟ್‌ ಮಾಲೀಕರ ತಲೆ ಬಿಸಿ ಆಗಿದೆ.

ಹೆಚ್ಚು ಬೆಲೆ ಕೊಟ್ಟು ಅಪಾರ್ಟ್‌ಮೆಂಟ್‌ಗಳಲ್ಲಿ ಬಾಡಿಗೆಗೆ ಬಂದಿರುವ ನಿವಾಸಿಗಳು ನೀರು ಕೊಡಿ ಇಲ್ಲವೇ ಬಾಡಿಗೆ ಕಡಿಮೆ ಮಾಡಿ ಎಂದು ಆಗ್ರಹಿಸಿದ್ದಾರೆ.

ಇನ್ನು ಸಾಕಷ್ಟು ಮಂದಿ ಫ್ಲಾಟ್‌ ಖಾಲಿ ಮಾಡಿಕೊಂಡು ಇಂಡಿಪೆಂಡೆಂಟ್‌ ಮನೆಗಳತ್ತ ಮುಖ ಮಾಡಿದ್ದಾರೆ. ಖಾಲಿ ಇರುವ ಫ್ಲಾಟ್‌ಗಳಿಗೆ ಬಾಡಿಗೆಗೆ ಬರಲು ಜನ ಹಿಂದೇಟು ಹಾಕುತ್ತಿದ್ದಾರೆ. ಟೆಕ್ ಪಾರ್ಕ್​​ಗಳಿಗೆ ಸನಿಹದಲ್ಲಿರುವ ಅಪಾರ್ಟ್ಮೆಂಟ್​​ಗಳಲ್ಲಿ ಪರಿಸ್ಥಿತಿ ತುಸು ಉತ್ತಮವಾಗಿದೆ. ಆದರೆ ಕನಕಪುರ ರಸ್ತೆಯ ಆಸುಪಾಸು ಇರುವ ಅಪಾರ್ಟ್ಮೆಂಟ್​​ಗಳಲ್ಲಿ ಸಮಸ್ಯೆ ಗಂಭೀರವಾಗಿದೆ ಎಂದು ರಿಯಲ್ ಎಸ್ಟೇಟ್ ಉದ್ಯಮಿಗಳು ತಿಳಿಸಿದ್ದಾರೆ.

ನಗರದಲ್ಲಿನ ಪೇಯಿಂಗ್ ಗೆಸ್ಟ್​​ಗಳು ಸಹ ಕಠಿಣ ಪರಿಸ್ಥಿತಿ ಎದುರಿಸುತ್ತಿವೆ. ಒಂದೆಡೆ ನೀರಿನ ಪೂರೈಕೆಗಾಗಿ ನೀರಿನ ಟ್ಯಾಂಕರ್‌ಗಳನ್ನು ಅವಲಂಬಿಸಬೇಕಾಗಿರುವುದರಿಂದ ಅವರ ನಿರ್ವಹಣಾ ವೆಚ್ಚವು ಗಮನಾರ್ಹವಾಗಿ ಹೆಚ್ಚಾಗಿದೆ. ಇನ್ನೊಂದೆಡೆ ಅನೇಕರು ಉತ್ತಮ ನೀರು ಸರಬರಾಜು ಇರುವ ಪ್ರದೇಶಗಳಿಗೆ ಸ್ಥಳಾಂತರಗೊಳ್ಳುತ್ತಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!