ಹೊಸದಿಗಂತ ಡಿಜಿಟಲ್ ಡೆಸ್ಕ್:
ಗಾಳಿ ಇಲ್ಲ, ಮಳೆ ಇಲ್ಲ ಅಂದ್ರೂ ಸಿಎಂ ಸಿದ್ದರಾಮಯ್ಯ ಸರ್ಕಾರಿ ನಿವಾಸದ ಬಳಿಯೇ ಬೃಹತ್ ಮರವೊಂದು ಧರೆಗುರುಳಿ ಅನಾಹುತ ಸಂಭವಿಸಿದೆ.
ಬೃಹತ್ ಮರ ಧರೆಗುರುಳಿದ ಪರಿಣಾಮ ರಸ್ತೆಯಲ್ಲಿ ಹೋಗುತ್ತಿದ್ದ ಟಿಟಿ ಹಾಗೂ ಇನ್ನೋವಾ ಮೇಲೆ ಮರದ ಕೊಂಬೆಗಳು ಬಿದ್ದಿವೆ. ಮರ ಬಿದ್ದ ಹಿನ್ನೆಲೆ ಶಿವಾನಂದ ಬಳಿಯೇ ಪೊಲೀಸರು ರಸ್ತೆ ಬಂದ್ ಮಾಡಿದ್ದಾರೆ.
ಜೂ.15ರಂದು ದ್ವಿಚಕ್ರ ವಾಹನದಲ್ಲಿ ಚಲಿಸುತ್ತಿದ್ದಾಗಲೇ ಮರದ ಕೊಂಬೆ ಬಿದ್ದು ಬಸವನಗುಡಿಯ ಬ್ರಹ್ಮ ಚೈತನ್ಯ ಮಂದಿರದ ಬಳಿ ಸವಾರ ಗಂಭೀರವಾಗಿ ಗಾಯಗೊಂಡಿದ್ದರು. 29 ವರ್ಷದ ಅಕ್ಷಯ್ ಗಂಭೀರವಾಗಿ ಗಾಯಗೊಂಡ ಸವಾರ. ಕೊಂಬೆ ಬೀಳುತ್ತಿದ್ದಂತೆ ನಿಯಂತ್ರಣ ತಪ್ಪಿ ಎದುರುಗಡೆ ನಿಲ್ಲಿಸಿದ್ದ ಕಾರಿಗೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದಿದೆ.