Tuesday, June 28, 2022

Latest Posts

ಹಳೇ ಮೈಸೂರು ಪ್ರಾಂತ್ಯದಲ್ಲಿ ಆಕ್ಸಿಜೆನ್ ಕೊರತೆ-ಪುಟ್ಟರಾಜು ಆರೋಪ

ದಿಗಂತ ವರದಿ ಮಂಡ್ಯ :

ಹಳೇ ಮೈಸೂರು ಪ್ರಾಂತ್ಯದ ಮೂರು ಜಿಲ್ಲೆಗಳಲ್ಲಿ ಕೋವಿಡ್ ಸೋಂಕಿತರಿಗೆ ಆಕ್ಸಿಜನ್ ಕೊರತೆ ತೀವ್ರವಾಗಿ ಕಾಡುತ್ತಿದ್ದು, ಪ್ರಾಣವಾಯು ಅಭಾವದಿಂದ ರೋಗಿಗಳು ಸಾವನ್ನಪ್ಪಿದರೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳೇ ಹೊಣೆ ಹೊರಬೇಕಾಗುತ್ತದೆ ಎಂದು ಮಾಜಿ ಸಚಿವ ಹಾಗೂ ಶಾಸಕ ಸಿ.ಎಸ್.ಪುಟ್ಟರಾಜು ಗಂಭೀರವಾಗಿ ಆರೋಪಿಸಿದರು.
ಸುದ್ದಿಗೊಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಆಕ್ಸಿಜನ್ ಕೊರತೆಯಿಂದ ನೆರೆ ಜಿಲ್ಲೆ ಚಾಮರಾಜನಗರದಲ್ಲಿ 24 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ. ಮಂಡ್ಯ, ಮೈಸೂರು ಮುಂತಾದ ಜಿಲ್ಲೆಗಳಲ್ಲಿ ಸಂಜೆ ವೇಳೆಗೆ ಆಕ್ಸಿಜನ್ ಖಾಲಿಯಾಗುವ ಸನ್ನಿವೇಶ ಸೃಷ್ಟಿಯಾಗಲಿದೆ ಎಂಬ ಮಾಹಿತಿ ಇದೆ ಆತಂಕ ಹೊರಹಾಕಿದರು.
ಈ ಬಗ್ಗೆ ರಾಜ್ಯದ ಮುಖ್ಯ ಕಾರ್ಯದರ್ಶಿ ಹಾಗೂ ಮುಖ್ಯಮಂತ್ರಿಗಳ ಆಪ್ತ ಅಧಿಕಾರಿಗಳಿಗೆ ಮಾಹಿತಿ ನೀಡಿ ಮನವಿ ಮಾಡಲಾಗಿದ್ದರೂ, ಯಾವುದೇ ಪ್ರಯೊಜನವಾಗಿಲ್ಲ. ಸರ್ಕಾರ ತಕ್ಷಣದಲ್ಲೇ ಎಚ್ಚೆತ್ತುಕೊಳ್ಳದಿದ್ದರೆ ಮುಂದಿನ ಅನಾಹುತದ ಹೊಣೆಗಾರಿಕೆಯನ್ನು ಹೊರಬೇಕಾಗುತ್ತದೆ ಎಂದು ಎಚ್ಚರಿಸಿದರು.
ಮಂಡ್ಯ ಜಿಲ್ಲಾಸ್ಪತ್ರೆ, ಮಾದೇಗೌಡ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಹಾಗೂ ಹಲವು ತಾಲ್ಲೂಕು ಆಸ್ಪತ್ರೆಗಳಲ್ಲಿ ವೆಂಟಿಲೇಟರ್ ಹಾಗೂ ಆಕ್ಸಿಜನ್ ಕೊರತೆ ಕಾಡುತ್ತಿದೆ. ರೋಗಿಗಳ ಸಂಖ್ಯೆ ಉಲ್ಬಣಿಸುತ್ತಿದ್ದು, ಈ ಬಗ್ಗೆ ವಿಶೇಷ ನಿಗಾವಹಿಸಬೇಕೆಂದು ಸರ್ಕಾರಕ್ಕೆ ಮನವಿ ಮಾಡಿದರು.
ಪ್ರವಾಸ ಬಿಡ-ವೈದ್ಯಕೀಯ ಪರಿಕರ ಒದಗಿಸಿ :
ಜಿಲ್ಲಾ ಉಸ್ತುವಾರಿ ಸಚಿವರ ಸ್ವಕ್ಷೇತ್ರದ ತಾಲ್ಲೂಕು ಆಸ್ಪತ್ರೆಯಲ್ಲೇ ಭಾನುವಾರ ಸಂಜೆ ಆಕ್ಸಿಜನ್ ಕೊರತೆ ಕಾಡಿದೆ. ಇಂದು ಬೆಳಿಗ್ಗೆ ಪಾಂಡವಪುರ ಉಪವಿಭಾಗೀಯ ಆಸ್ಪತ್ರೆಯಲ್ಲೂ ಸಹ ಆಕ್ಸಿಜನ್ ಕೊರತೆ ಕಾಡಿದೆ.
ಜಿಲ್ಲಾ ಉಸ್ತುವಾರಿ ಸಚಿವರು ಕೇವಲ ಪ್ರವಾಸ ಮಾಡಿದರೆ ಸಾಲದು. ಸರ್ಕಾರದಿಂದ ಆಕ್ಸಿಜನ್ ಸೇರಿದಂತೆ ವೈದ್ಯಕೀಯ ಪರಿಕರಗಳ ಸೌಲಭ್ಯ ಕಲ್ಪಿಸುವ ನಿಟ್ಟಿನಲ್ಲಿ ಕಾರ್ಯೋನ್ಮುಖರಾಗಬೇಕೆಂದು ಕಿವಿಮಾತು ಹೇಳಿದರು.
ಆಕ್ಸಿಜನ್ ಕೊರತೆ ನೀಗಿಸಲು ಜಿಲ್ಲೆಯ ಸಂಸದರು ಮುಂದಾಗಬೇಕು. ಕೇಂದ್ರ ಸರ್ಕಾರದ ಮೇಲೆ ತಮ್ಮ ಪ್ರಭಾವ ಬೀರಿ ರಾಜ್ಯದ ನೆರವಿಗೆ ಧಾವಿಸುವಂತೆ ಕಾರ್ಯ ನಿರ್ವಹಿಸಲು ಮುಂದಾಗಬೇಕೆಂದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_img
spot_img
spot_img
spot_img

Don't Miss