ಸಿದ್ದರಾಮಯ್ಯ ಮಂಡಿಸಿದ ಬಜೆಟ್​ನಲ್ಲಿ ವಿಶೇಷತೆ ಏನಿಲ್ಲ: ಮಾಜಿ ಸಿಎಂ ಕುಮಾರಸ್ವಾಮಿ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಆದಾಯ ಹೆಚ್ಚಿಸಲು ಸಿದ್ದರಾಮಯ್ಯ ಸರ್ಕಾರ ಅಬಕಾರಿ ಸುಂಕ ಹೆಚ್ಚಿಸಿದೆ. ಅನ್ನಭಾಗ್ಯ ಅಕ್ಕಿಗೆ ನೀಡುವ ಹಣ ಅಬಕಾರಿ ಇಲಾಖೆಗೆ ಹೋಗುತ್ತೆ. ಆ ಅನ್ನಭಾಗ್ಯದ ಹಣವನ್ನು ತೆಗೆದುಕೊಂಡು ಮನೆಗೆ ಹೋಗುತ್ತಾನೋ, ಇನ್ನೆಲ್ಲಿಗೆ ಹೋಗುತ್ತಾನೋ ನನಗೆ ಗೊತ್ತಿಲ್ಲ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಕಾಂಗ್ರೆಸ್​ ವಿರುದ್ಧ ಕಿಡಿಕಾರಿದ್ದಾರೆ.

ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಮಂಡಿಸಿದ ಬಜೆಟ್​ನಲ್ಲಿ ವಿಶೇಷತೆ ಏನಿಲ್ಲ ಎಂದಿದ್ದಾರೆ. ಬಜೆಟ್​ಗಳ ಅಧ್ಯಯನ ಮಾಡಿದ್ದೇನೆ ಎಂದ ಹೆಚ್​.ಡಿ ಕುಮಾರಸ್ವಾಮಿ, ಒಂದೇ ವರ್ಷಕ್ಕೆ ಜನರ ಮೇಲೆ 85,000 ಕೋಟಿ ಸಾಲ ಹೇರುತ್ತಿದ್ದಾರೆ. 1995ರಿಂದ ಈವರೆಗೆ ಸಿದ್ದರಾಮಯ್ಯ ಮಂಡಿಸಿದ 13 ಬಜೆಟ್​ಗಳ ಅಧ್ಯಯನ ಮಾಡಿದ್ದೇನೆ. ದುಡಿಯುವ ಕೈಗಳಿಗೆ ಸ್ವಾವಲಂಭಿಯಾಗಿಸಲು ಯೋಜನೆ ಏನು ಎಂದು ಪ್ರಶ್ನಿಸಿದರು.

ಇನ್ನೂ ಎರಡು ಗ್ಯಾರಂಟಿಗಳನ್ನು ಕೊಡಿ ನಮ್ಮದೇನು ತಕರಾರಿಲ್ಲ. ಗ್ಯಾರಂಟಿಗಳಿಗೆ ವರ್ಷಕ್ಕೆ 50-60 ಸಾವಿರ ಕೋಟಿ ವೆಚ್ಚ ಆಗಲಿದೆ. ಬೇರೆ ಯಾವುದಕ್ಕೂ ಬಜೆಟ್​ನಲ್ಲಿ ಸರ್ಕಾರ ಹಣ ಮೀಸಲಿಟ್ಟಿಲ್ಲ. ಕೇಂದ್ರ ಮತ್ತು ಹಿಂದಿನ ಸರ್ಕಾರವನ್ನು ದೂಷಿಸುವ ಬಜೆಟ್ ಅಷ್ಟೇ ಎಂದು ವ್ಯಂಗ್ಯವಾಡಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!