ಹೊಸದಿಗಂತ ಡಿಜಿಟಲ್ ಡೆಸ್ಕ್:
ಕರ್ನಾಟಕ ಕಾಂಗ್ರೆಸ್ ಮುಖ್ಯಮಂತ್ರಿ ಹುದ್ದೆಗೆ ಅಭ್ಯರ್ಥಿಗಳ ಪಟ್ಟಿ ಉದ್ದವಾಗುತ್ತಿದೆ. ಇತ್ತೀಚೆಗಷ್ಟೇ ಶಾಸಕ ಆರ್.ವಿ.ದೇಶಪಾಂಡೆ, ಸಚಿವ ಜಮೀರ್ ಅಹ್ಮದ್ ಸೇರಿದಂತೆ ಐದಾರು ಮುಖಂಡರು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸುವ ಇಚ್ಛೆ ವ್ಯಕ್ತಪಡಿಸಿದ್ದರು.
ಈ ಕುರಿತು ಮಾತನಾಡಿದ ಮಾಜಿ ಸಂಸದ ಡಿಕೆ ಸುರೇಶ್, ಸಿಎಂ ಹುದ್ದೆ ಖಾಲಿ ಇಲ್ಲ, ಕೇಳುವುದರಲ್ಲಿ ತಪ್ಪಿಲ್ಲ. ನಾನೇ ಮುಖ್ಯಮಂತ್ರಿಯಾಗುತ್ತೇನೆ ಎಂದು ಬಿಜೆಪಿ, ಜೆಡಿಎಸ್ ಮುಖಂಡರು ಹೇಳಿದ್ದಾರೆ. ಇದೊಂದು ರಾಜಕೀಯ ತಂತ್ರ. ತಮ್ಮ ಪಕ್ಷ ಉಳಿಸಿಕೊಳ್ಳಲು ಹೀಗೆ ಹೇಳಿದ್ದಾರೆ.
ರಾಜ್ಯದಲ್ಲಿ ಸದೃಢ ಸರಕಾರವಿದ್ದು, ನಮ್ಮ ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ. ಪರಿಣಾಮಕಾರಿ ನಾಯಕತ್ವವಿದೆ. ಕಾಂಗ್ರೆಸ್ ಸರ್ಕಾರ ರಚನೆಯಾಗಲಿದ್ದು, ಸಿದ್ದರಾಮಯ್ಯ ಅವರೇ ಐದು ವರ್ಷ ಮುಖ್ಯಮಂತ್ರಿಯಾಗಿ ಅಧಿಕಾರ ನಡೆಸಲಿದ್ದಾರೆ ಎಂದು ಡಿಕೆ ಸುರೇಶ್ ಹೇಳಿದ್ದಾರೆ.