ಆಸೆ ಪಡೋದ್ರಲ್ಲಿ ಏನೂ ತಪ್ಪಿಲ್ಲ, ನಾನೂ ಸಿಎಂ ಆಕಾಂಕ್ಷಿ- ರಾಯರೆಡ್ಡಿ

ಹೊಸದಿಗಂತ ವರದಿ ಕೊಪ್ಪಳ:

ರಾಜ್ಯದಲ್ಲಿ ಸಿಎಂ ಆಗಲು ಕೆಲವರು ಆಸೆ ಪಡುತ್ತಿದ್ದಾರೆ. ಆಸೆ ಪಡುವುದರಲ್ಲಿ ತಪ್ಪಿಲ್ಲ. ನಾನು ಸಿಎಂ ಆಕಾಂಕ್ಷಿ ಎಂದು ಸಿಎಂ ಆರ್ಥಿಕ ಸಲಹೆಗಾರ ಹಾಗೂ ಶಾಸಕ ಬಸವರಾಜ ರಾಯರೆಡ್ಡಿ ಹೇಳಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಮಾತನಾಡಿದ ಅವರು, ಸಿಎಂ ಕುರ್ಚಿ ಖಾಲಿ ಎಲ್ಲಿದೆ. ನನ್ನ ಪ್ರಕಾರ ಸಿಎಂ ಸಿದ್ದರಾಮಯ್ಯ ಉಳಿದ ಅವಧಿಗೂ ಮುಂದುವರಿಯಲಿದ್ದಾರೆ. ಅವರು ಸಿಎಂ ಆಗಿ ಮುಂದುವರಿಯುವುದರಿಂದ ರಾಜ್ಯಕ್ಕೆ ಒಳ್ಳೆಯದಾಗಲಿದೆ. ನನಗೇನು ಸಿದ್ದರಾಮಯ್ಯ ಅವರಿಂದ ಆಗಬೇಕಾಗಿದ್ದೇನಿಲ್ಲ. ಅವರಿಂದ ರಾಜ್ಯಕ್ಕೆ ಒಳ್ಳೆಯದಾಗುತ್ತದೆ ಎನ್ನುವ ಕಾರಣಕ್ಕಾಗಿ ನಾನು ಸಿಎಂ ಪರ ಮಾತನಾಡುತ್ತಿರುವೆ ಎಂದರು.

ಅವರಿಗೆ ಆಡಳಿತದ ಅನುಭವ ಇದೆ. ಆದ್ದರಿಂದ ಅವರೇ ಸಿಎಂ ಆಗಿ ಮುಂದುವರಿಯಲಿ. ಅವರು ಸಿಎಂ ಕುರ್ಚಿಯಿಂದ ಕೆಳಗೆ ಇಳಿಯುತ್ತಾರೆ ಎಂದು ಯಾರು ಹೇಳಿದ್ದಾರೆ? ಅವರು ಸಿಎಂ ಸ್ಥಾನ ಕ್ಕೆ ರಾಜೀನಾಮೆ ಕೊಡಬಾರದು ಎಂಬುದು ನನ್ನ ಅಭಿಪ್ರಾಯ. ಅವರ ಮೇಲೆ ಯಾವುದೇ ಭ್ರಷ್ಟಾಚಾರ ದ ಆರೋಪವಿಲ್ಲ ಸಿಎಂ ಕುರ್ಚಿ ಖಾಲಿ ಇಲ್ಲ. ಯಾರೂ ಆಸೆ ಪಡುವ ಅವಶ್ಯಕತೆ ಇಲ್ಲ ಎಂದರು

- Advertisement - Skool Shine
Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!