ಸಿದ್ದರಾಮಯ್ಯ ಹೇಳಿರುವುದರಲ್ಲಿ ತಪ್ಪೇನಿಲ್ಲ: ಸಚಿವ ಮಲ್ಲಿಕಾರ್ಜುನ

ಹೊಸದಿಗಂತ ವರದಿ,ದಾವಣಗೆರೆ:

ಹಿಜಾಬ್ ನಿಷೇಧ ಆದೇಶ ಹಿಂಪಡೆಯುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿರುವುದರಲ್ಲಿ ತಪ್ಪೇನಿಲ್ಲ ಎಂದು ಗಣಿ ಮತ್ತು ಭೂವಿಜ್ಞಾನ, ತೋಟಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ ಸಮರ್ಥಿಸಿಕೊಂಡಿದ್ದಾರೆ.

ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಹೇಳಿಕೆಯನ್ನು ನಾನು ಸ್ವಾಗತಿಸುತ್ತೇನೆ. ಅವರು ಹೇಳಿದ್ದರಲ್ಲಿ ತಪ್ಪೇನೂ ಇಲ್ಲ. ಎಲ್ಲಾ ಸಮುದಾಯಗಳಿಗೆ ಅವರದ್ದೇ ಆದ ಸಂಪ್ರದಾಯ, ಆಚರಣೆ ಇರುತ್ತವೆ. ಹೀಗಾಗಿ ಹಿಜಾಬ್ ನಿಷೇಧ ಆದೇಶ ಹಿಂಪಡೆಯುವುದಾಗಿ ಮುಖ್ಯಮಂತ್ರಿ ಹೇಳಿರುವುದರಲ್ಲಿ ತಪ್ಪೇನಿದೆ? ಎಂದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!