ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೆಪಿಸಿಸಿ ಕಚೇರಿಯಲ್ಲಿ ಸಭೆ ಪೂರ್ತಿಗೊಂಡ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಲೋಕೋಪಯೋಗಿ ಖಾತೆ ಸಚಿವ ಸತೀಶ್ ಜಾರಕಿಹೊಳಿ, ಎಲ್ಲ ಮಂತ್ರಿಗಳು ಮತ್ತು ಕಾರ್ಯಕರ್ತರ ಸಮಕ್ಷಮದಲ್ಲಿ ಕರ್ನಾಟಕದ ಉಸ್ತುವಾರಿ ರಂದೀಪ್ ಸುರ್ಜೇವಾಲಾ ಅವರು ಜವಾಬ್ದಾರಿ ಮತ್ತು ಶಿಸ್ತಿನ ಬಗ್ಗೆ ಮಾಡಿರುವುದರಲ್ಲಿ ಯಾವ ತಪ್ಪೂ ಇಲ್ಲ ಎಂದು ಹೇಳಿದ್ದಾರೆ.
ಕಾಂಗ್ರೆಸ್ ಕಾರ್ಯಕರ್ತರ ಪಕ್ಷ ಅಂತ ಡಿಕೆ ಶಿವವಕುಮಾರ್ ಹೇಳಿರುವುದಕ್ಕೆ ಪ್ರತಿಕ್ರಿಯೆ ನೀಡಿದ ಜಾರಕಿಹೊಳಿ, ಅದೇ ಮಾತನ್ನು ತಾನು ಹತ್ತಾರು ಸಲ ಹೇಳಿದ್ದು, ಕಾರ್ಯಕರ್ತರ ನೆರವಿಲ್ಲದೆ ಸರ್ಕಾರ ನಡೆಸುವುದು ಸಾಧ್ಯವಿಲ್ಲ ಎಂದರು.