ಭಾರತ್ ಜೋಡೋ ನ್ಯಾಯ್ ಯಾತ್ರೆಗೆ ಬರುವೆ ಆದ್ರೆ ಒಂದು ಕಂಡೀಶನ್: ಅಖಿಲೇಶ್​ ಯಾದವ್​

ಹೊಸದಿಗಂತ ಡಿಜಿಟಲ್ ಡೆಸ್ಕ್:

ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್‌ನೊಂದಿಗೆ ಸೀಟು ಹಂಚಿಕೆ ಅಂತಿಮಗೊಳ್ಳುವವರೆಗೆ ಸಮಾಜವಾದಿ ಪಕ್ಷವು ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ನ್ಯಾಯ್ ಯಾತ್ರೆಯಲ್ಲಿ ಭಾಗವಹಿಸುವುದಿಲ್ಲ ಎಂದು ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಸೋಮವಾರ ಹೇಳಿದ್ದಾರೆ.

ರಾಹುಲ್​ ಗಾಂಧಿ ನೇತೃತ್ವದ ಭಾರತ್​ ಜೋಡೋ ನ್ಯಾಯ್​ ಯಾತ್ರೆ ಫೆಬ್ರವರಿ 19 ರಂದು ಅಮೇಥಿ ಮೂಲಕ ಹಾದು ಹೋಗಲಿದೆ.ಆದ್ರೆ ಯಾತ್ರೆ ಯಲ್ಲಿ ಪಾಲ್ಗೊಳ್ಳಬೇಕಾದರೆ ಒಂದು ಷರತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್​ ಯಾದವ್ ಹೇಳಿದ್ದಾರೆ.

ಸೀಟುಗಳ ಸಂಖ್ಯೆ ಮತ್ತು ಸ್ಥಾನಗಳ ಹೆಸರುಗಳನ್ನು ಈಗಾಗಲೇ ನಿರ್ಧರಿಸಲಾಗಿದೆ, ಆದರೆ ರಾಹುಲ್ ಗಾಂಧಿ ಕೆಲವು ಸ್ಥಾನಗಳಲ್ಲಿ ಅಚಲವಾಗಿದ್ದು, ಮೈತ್ರಿಯನ್ನು ಅಂತಿಮಗೊಳಿಸುವಲ್ಲಿ ವಿಳಂಬವಾಗಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಅಖಿಲೇಶ್ ಯಾದವ್, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಮತ್ತು ಮಲ್ಲಿಕಾರ್ಜುನ ಖರ್ಗೆ ನಡುವೆ ಮಾತುಕತೆ ನಡೆದಿದೆ, ಆದರೆ ಸೀಟುಗಳ ಬಗ್ಗೆ ಇನ್ನೂ ಅಂತಿಮ ಒಪ್ಪಂದಕ್ಕೆ ಬಂದಿಲ್ಲ. ಮೂಲಗಳ ಪ್ರಕಾರ ಉತ್ತರ ಪ್ರದೇಶದ 80 ಲೋಕಸಭೆ ಸ್ಥಾನಗಳಲ್ಲಿ 15 ಸ್ಥಾನಗಳನ್ನು ಕಾಂಗ್ರೆಸ್​​ಗೆ ಬಿಟ್ಟುಕೊಡುತ್ತೇವೆ ಎಂದು ಸಮಾಜವಾದಿ ಪಕ್ಷ ಹೇಳಿದೆ. 2019 ರ ಲೋಕಸಭಾ ಚುನಾವಣೆಯಲ್ಲಿ, ಕಾಂಗ್ರೆಸ್ ಭಾರತದಾದ್ಯಂತ 52 ಸ್ಥಾನಗಳನ್ನು ಗೆದ್ದಿತ್ತು. ಅವುಗಳಲ್ಲಿ ಕೆಲವೇ ಕೆಲವು ಈಶಾನ್ಯ ಅಥವಾ ಹಿಂದಿ ಬೆಲ್ಟ್‌ನಲ್ಲಿ. ಅಮೇಠಿಯಲ್ಲಿ ಸ್ಮೃತಿ ಇರಾನಿ ವಿರುದ್ಧ ರಾಹುಲ್ ಗಾಂಧಿ ಸೋತಿದ್ದರಿಂದ ಉತ್ತರ ಪ್ರದೇಶದಲ್ಲಿ ರಾಯ್‌ಬರೇಲಿಯಲ್ಲಿ ಕೇವಲ ಒಂದು ಸ್ಥಾನ ಮಾತ್ರ ಗೆದ್ದಿತ್ತು.2019 ರಲ್ಲಿ, ಸಮಾಜವಾದಿ ಕಾಂಗ್ರೆಸ್‌ಗೆಅಮೇಥಿ ಮತ್ತು ರಾಯ್‌ಬರೇಲಿಯಲ್ಲಿ ಸ್ಪರ್ಧಿಸುವುದನ್ನು ತಪ್ಪಿಸಿತ್ತು. ಆದರೆ, ಈ ಬಾರಿ ದೃಢ ನಿಲುವು ತಳೆದಿರುವ ಪಕ್ಷವು ಕಾಂಗ್ರೆಸ್‌ಗೆ 15 ಸ್ಥಾನಗಳನ್ನು ನೀಡುವುದಾಗಿ ಹೇಳಿದ್ದು, ಮೈತ್ರಿ ಮಾಡಿಕೊಂಡರೆ ಬೇರೆ ಯಾವುದೇ ಸ್ಥಾನಗಳಲ್ಲಿ ಕಾಂಗ್ರೆಸ್‌ ಸ್ಪರ್ಧಿಸಲು ಸಾಧ್ಯವಿಲ್ಲ ಎಂದು ಹಠ ಹಿಡಿದಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!