ಈ ಪ್ರಕರಣದ ಹಿಂದೆ ರಾಜಕೀಯ ಕುತಂತ್ರ ಇದೆ, ವಿಪಕ್ಷ ನಾಯಕ ಆರ್.ಅಶೋಕ್ ಅಚ್ಚರಿ ಹೇಳಿಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಪ್ರಜ್ವಲ್ ರೇವಣ್ಣ ಮತ್ತು ಹೆಚ್ ಡಿ ರೇವಣ್ಣ ಪ್ರಕರಣ ರಾಷ್ಟ್ರ ರಾಜಕಾರಣದಲ್ಲಿ ಸಂಚಲನ ಮೂಡಿಸಿತ್ತು. ಈ ಘಟನೆಯ ಹಿಂದೆ ರಾಜಕೀಯ ಷಡ್ಯಂತ್ರವಿದೆ ಎಂದು ಜೆಡಿಎಸ್ ಮುಖಂಡರು ಹಾಗೂ ಕೆಲ ಬಿಜೆಪಿ ಮುಖಂಡರು ಕಾಂಗ್ರೆಸ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮತ್ತೊಂದೆಡೆ ಪ್ರತಿಪಕ್ಷ ನಾಯಕ ಆರ್.ಅಶೋಕ್ ಅವರು ಪ್ರಜ್ವಲ್​ ಮತ್ತು ರೇವಣ್ಣ ವಿಚಾರದಲ್ಲಿ ಖಡಕ್ ಮಾತುಗಳನ್ನಾಡಿದ್ದು ಅಚ್ಚರಿಗೆ ಕಾರಣವಾಗಿದೆ.

ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅಶೋಕ್, ಮಾಜಿ ಸಚಿವ ಹೆಚ್‌.ಡಿ.ರೇವಣ್ಣರನ್ನು ಬಂಧಿಸಿದ್ದು ಸರಿಯಾಗಿದೆ. ಇನ್ನು ನಮ್ಮ ಹೊಂದಾಣಿಕೆಯಲ್ಲಿ ಪ್ರಜ್ವಲ್ ರೇವಣ್ಣ ಇನ್ನೂ ಗೆದ್ದಿಲ್ಲ. ಗೆದ್ದರೆ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದ್ದಾರೆ. ಈ ಮೂಲಕ ರಾಜ್ಯ ರಾಜಕಾರಣದಲ್ಲಿ ಅಲೆ ಎಬ್ಬಿಸಿದ್ದಾರೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!