ಹೊಸದಿಗಂತ ಡಿಜಿಟಲ್ ಡೆಸ್ಕ್ :
ಬಾಂಗ್ಲಾದೇಶದಲ್ಲಿ ಇನ್ನೂ ಮುಹಮ್ಮದ್ ಅಲಿ ಜಿನ್ನಾ ಅವರ “ಆತ್ಮ” ಉಳಿದಿದೆ. ನೆರೆಯ ದೇಶದಲ್ಲಿ ಹಿಂದುಗಳ ವಿರುದ್ಧ ನಡೆಯುತ್ತಿರುವ ಹಿಂಸಾಚಾರಕ್ಕೆ ಅವರ ಪರಂಪರೆಯೇ ಕಾರಣ ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಶುಕ್ರವಾರ ಹೇಳಿದ್ದಾರೆ.
ಬಾಂಗ್ಲಾದೇಶದಲ್ಲಿ ಹಿಂದುಗಳ ಮೇಲೆ ದಾಳಿ ಮಾಡಲಾಗುತ್ತಿದೆ, ಅವರ ಮನೆಗಳನ್ನು ಲೂಟಿ ಮಾಡಲಾಗುತ್ತಿದೆ ಮತ್ತು ಬೆಂಕಿ ಹಚ್ಚಲಾಗುತ್ತಿದೆ. ಅಂತಹ ಪರಿಸ್ಥಿತಿ ಏಕೆ ಬಂತು? ಜಿನ್ನಾ ಅವರ ಆತ್ಮ ಬಾಂಗ್ಲಾದೇಶದಲ್ಲಿ ಉಳಿಯುವವರೆಗೂ ದೌರ್ಜನ್ಯಗಳು ನಡೆಯುತ್ತಲೇ ಇರುತ್ತವೆ ಎಂಬುದನ್ನು ಮರೆಯದಿರಿ ಎಂದು ಯೋಗಿ ಆದಿತ್ಯನಾಥ್ ಹೇಳಿದ್ದಾರೆ.
1947 ರಲ್ಲಿ ದೇಶ ವಿಭಜನೆಯ ರೂಪದಲ್ಲಿ ನಮ್ಮ ಮುಂದೆ ಬಂದ ಪಾಪ, ಅದರ ಕೊಳಕು ಮುಖವನ್ನು ಇಂದು ಬಾಂಗ್ಲಾದೇಶದಲ್ಲಿ ನಾವು ನೋಡುತ್ತಿದ್ದೇವೆ ಎಂದರು.
ಹಿಂದುಗಳು ಮತ್ತು ಇತರ ಧಾರ್ಮಿಕ ಅಲ್ಪಸಂಖ್ಯಾತರ ಮೇಲಿನ ದೌರ್ಜನ್ಯದ ವಿರುದ್ಧ ರಾಜಧಾನಿ ಢಾಕಾ ಸೇರಿದಂತೆ ಬಾಂಗ್ಲಾದೇಶದಾದ್ಯಂತ ಪ್ರತಿಭಟನೆಗಳು ಭುಗಿಲೆದ್ದಿವೆ. ದೇಶದ್ರೋಹದ ಆರೋಪದಲ್ಲಿ ಬಂಧಿತರಾಗಿರುವ ಇಸ್ಕಾನ್ ಮಾಜಿ ನಾಯಕ ಚಿನ್ಮೋಯ್ ಕೃಷ್ಣ ದಾಸ್ ಅವರನ್ನು ಬಿಡುಗಡೆ ಮಾಡುವಂತೆ ಪ್ರತಿಭಟನಾಕಾರರು ಒತ್ತಾಯಿಸಿದ್ದು, ದೇಶದಲ್ಲಿ ಉದ್ವಿಗ್ನತೆಯನ್ನು ಮತ್ತಷ್ಟು ಹೆಚ್ಚಿಸಿದೆ.