ಹೊಸದಿಗಂತ ಡಿಜಿಟಲ್ ಡೆಸ್ಕ್:
ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರು ಪೂರೈಕೆಯಲ್ಲಿ ಯಾವುದೇ ಲೋಪ ಆಗಬಾರದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ರಾಜ್ಯದ ಎಲ್ಲ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಜೊತೆಗೆ ವಿಡಿಯೋ ಸಂವಾದ ನಡೆಸಿದ ಅವರು, ಕಳೆದ ವರ್ಷ ಉದ್ಭವಿಸಿದ್ದ ಸಮಸ್ಯೆಗಳನ್ನು ಅವಲೋಕಿಸಿ ಮುನ್ನಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಸೂಚಿಸಿದ್ದಾರೆ.
ಕೊಳವೆ ಬಾವಿಗಳ ದುರಸ್ತಿ, ಗ್ರಾಮೀಣ ಪ್ರದೇಶಗಳಲ್ಲಿ ಖಾಸಗಿ ಕೊಳವೆ ಬಾವಿಗಳನ್ನು ಬಾಡಿಗೆಗೆ ಪಡೆಯಬೇಕು, ವಾಹನಗಳ ಮೂಲಕ ನೀರು ಸರಬರಾಜಿಗೆ ಆದ್ಯತೆ ನೀಡಬೇಕು. ಜಿಲ್ಲಾಧಿಕಾರಿಗಳು ಮತ್ತು ಇತರ ಇಲಾಖೆಗಳ ಅಧಿಕಾರಿಗಳ ಜೊತೆ ಸಭೆ ನಡೆಸಬೇಕು, ಯಾವುದೇ ಸಮಸ್ಯೆ ಎದುರಾಗದಂತೆ ನಿಗಾ ವಹಿಸಬೇಕು ಎಂದು ಹೇಳಿದ್ದಾರೆ.