ಹೊಸದಿಗಂತ ಡಿಜಿಟಲ್ ಡೆಸ್ಕ್:
ಮುಂದಿನ ತಿಂಗಳ ಗಣೇಶ ಚತುರ್ಥಿಯ ಸಂಭ್ರಮ. ಗಣೇಶ ಮೂರ್ತಿ ಕೂರಿಸಲು ಈಗಾಗಲೇ ಎಲ್ಲೆಡೆ ಸಿದ್ಧತೆಗಳು ನಡೆಯುತ್ತಿವೆ. ಅಂತೆಯೇ ಬೆಂಗಳೂರಿನ ಧರ್ಮರಾಯಸ್ವಾಮಿ ದೇವಾಲಯದ ಬಳಿಯೂ ಗಣೇಶ ಮೂರ್ತಿ ಕೂರಿಸುವ ವಿಚಾರಕ್ಕೆ ಜಗಳ ನಡೆದಿದ್ದು, ಓರ್ವನಿಗೆ ಚಾಕು ಇರಿಯಲಾಗಿದೆ.
ಅಜಿತ್ ಚಾಕು ಇರಿತಕ್ಕೊಳಗಾದ ವ್ಯಕ್ತಿ. ಆರೋಪಿ ಸುಮನ್ ಅಜಿತ್ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದು, ಚಾಕುವಿನಿಂದ ಬೆನ್ನು, ಎದೆ, ಕುತ್ತಿಗೆ ಭಾಗಕ್ಕೆ ಬಲವಾಗಿ ಇರಿದಿದ್ದಾನೆ. ರಕ್ತದ ಮಡುವಿನಲ್ಲಿದ್ದ ಅಜಿತ್‌ನನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ಸಂಬಂಧ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.