March 3, 2026
Tuesday, March 3, 2026
spot_img

‘ಕೊತ್ವಾಲ್ ಶಿಷ್ಯ ಪುಟ್ಟಸ್ವಾಮಿಯಿಂದ ಜೀವ ಬೆದರಿಕೆ ಇತ್ತು’

ಹೊಸದಿಗಂತ ಡಿಜಿಟಲ್ ಡೆಸ್ಕ್:

ರೌಡಿ ಕೊತ್ವಾಲ್ ರಾಮಚಂದ್ರನ ಜೊತೆ ಇದ್ದ ಪುಟ್ಟಸ್ವಾಮಿಯಿಂದ ನನಗೆ ಜೀವ ಬೆದರಿಕೆ ಇತ್ತು. ಆದರೆ, ನಾನು ಹೆದರಲಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಹಿಂದೆ ರೌಡಿ ಕೊತ್ವಾಲ್ ರಾಮಚಂದ್ರನ ಜೊತೆ ಇದ್ದ ಪುಟ್ಟಸ್ವಾಮಿಯಿಂದ ಜೀವ ಬೆದರಿಕೆ ಇತ್ತು. ನಾನು ಹೆದರಲಿಲ್ಲ. ಕುರುಬರ ಸಂಘದ ವಿಚಾರದಲ್ಲಿ ಭಾಗಿ ಆಗದಂತೆ ನನಗೆ ಬೆದರಿಕೆ ಇತ್ತು. ಆದರೂ ನಾನು ಹೆದರದೆ ಗ್ರಾಮೀಣ ಭಾಗದ ಸಂಘದ ನಿರ್ದೇಶಕರ ಬೆಂಬಲದಲ್ಲಿ ದಾವಣಗೆರೆಯ ಮಲ್ಲಪ್ಪ ಅವರನ್ನು ರೌಡಿ ಪುಟ್ಟಸ್ವಾಮಿ ವಿರುದ್ಧ ಸಂಘದ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆಗೆ ನಿಲ್ಲಿಸಿದೆ. ಪುಟ್ಟಸ್ವಾಮಿ ನ್ಯಾಯಾಲಯಕ್ಕೆ ಹೋದರೂ ತೀರ್ಪು ನಮ್ಮ ಪರವಾಗಿ ಬಂತು. ಹೀಗೆ ಸಂಘವನ್ನು ನಾನು ಉಳಿಸಿದ್ದೆ ಎಂದು ಹೇಳಿದ್ದಾರೆ.

ಬಳಿಕ ನನ್ನ ಹಳೇ ಕಾರಲ್ಲಿ ಇಡೀ ರಾಜ್ಯ ಸುತ್ತಿ ಸಮಾಜವನ್ನು ಸಂಘಟಿಸಿದೆ. ತಾರಾಕಾನಂದರನ್ನು ಪೀಠಾಧ್ಯಕ್ಷರನ್ನಾಗಿ ಮಾಡಲು ತೀರ್ಮಾನಿಸಿದ್ದು ನಾನೇ. ಮುಖ್ಯಮಂತ್ರಿ ಆಗಿದ್ದ ಬಂಗಾರಪ್ಪ ಅವರನ್ನು ಮತ್ತು ಕೇಂದ್ರ ಸಚಿವರಾಗಿದ್ದ ಶರದ್ ಪವಾರ್ ಅವರನ್ನು ಕರೆಸಿ ಪೀಠಕ್ಕೆ ಚಾಲನೆ ನೀಡಲಾಯಿತು. ಹೀಗೆ ಕುರುಬರ ಸಂಘ ಮತ್ತು ಕುರುಬ ಸಮಾಜದ ಪೀಠವನ್ನು ಉಳಿಸಿದ್ದು ನಾನು ಎಂದು ತಿಳಿಸಿದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !