ಹೊಸದಿಗಂತ ಡಿಜಿಟಲ್ ಡೆಸ್ಕ್:
ಆಪ್ ರಾಜ್ಯಸಭಾ ಸದಸ್ಯೆ ಸ್ವಾತಿ ಮಲಿವಾಲ್ ಅವರ ಮೇಲಿನ ಹಲ್ಲೆ ಪ್ರಕರಣ ಸಂಬಂಧ ಸಿಎಂ ಅರವಿಂದ್ ಕೇಜ್ರಿವಾಲ್ ಆಪ್ತ ಬಿಭವ್ ಕುಮಾರ್ ಬಂಧನ ಖಂಡಿಸಿ ಬಿಜೆಪಿ ಪ್ರಧಾನ ಕಚೇರಿಯ ಹೊರಗೆ ಪ್ರತಿಭಟನೆ ನಡೆಸಲು ಸಜ್ಜಾಗಿದ್ದಾರೆ.
ಈ ನಡುವೆ ಎಕ್ಸ್ ಖಾತೆಯಲ್ಲಿ ಪ್ರತಿಕ್ರಿಯೆ ನೀಡಿರುವ ಸ್ವಾತಿ ಮಲಿವಾಲ್, ಆಪ್ ಪ್ರತಿಭಟನೆಗೆ ವಿರೋಧ ವ್ಯಕ್ತಪಡಿಸಿದ್ದಾರೆ.
ನಿರ್ಭಯಾಗೆ ನ್ಯಾಯ ಕೊಡಿಸಲು ನಾವೆಲ್ಲ ಬೀದಿಗಿಳಿದ ಕಾಲವೊಂದಿತ್ತು. ಆದರಿಂದು 12 ವರ್ಷಗಳ ನಂತರ ಸಿಸಿಟಿವಿ ದೃಶ್ಯಾವಳಿಗಳನ್ನು ಕಣ್ಮರೆಯಾಗುವಂತೆ ಮಾಡಿ ಫೋನ್ ಫಾರ್ಮಾಟ್ ಮಾಡಿದ ಆರೋಪಿಗಳನ್ನು ಉಳಿಸಲು ಬೀದಿಗಿಳಿದಿದ್ದೇವೆಯೇ? ಎಂದು ಪ್ರಶ್ನೆ ಮಾಡಿದ್ದಾರೆ.
ಇದೇ ವೇಳೆ ಸಚಿವ ಮನಿಷ್ ಸಿಸೋಡಿಯಾ ಪರ ಮಾತನಾಡಿರುವ ಮಲಿವಾಲ್, ಮನೀಶ್ ಸಿಸೋಡಿಯಾಜಿ ಅವರಿಗಾಗಿ ಇಷ್ಟು ಬಲಪ್ರಯೋಗ ಮಾಡಿದ್ದರೆ ನಾನು ಒಪ್ಪಿಕೊಳ್ಳುತ್ತಿದೆ. ಅವರು ಇಲ್ಲಿ ಇದ್ದಿದ್ದರೆ ಬಹುಶಃ ನನ್ನ ಮೇಲೆ ಹಲ್ಲೆ ನಡೆಯುತ್ತಿರಲಿಲ್ಲ ಎಂದು ಭಾವುಕರಾಗಿದ್ದಾರೆ.
ಸ್ವಾತಿ ಮಲಿವಲ್ ಮೇಲೆ ದೌರ್ಜನ್ಯ ಎಸಗಿದ ದೆಹಲಿ ಸಿಎಂ ಕೇಜ್ರಿವಾಲ್ ಆಪ್ತ ಸಹಾಯಕ ಬಿಭವ್ ಕುಮಾರ್ ಅವರನ್ನು ಪೊಲೀಸರು ಶನಿವಾರವಷ್ಟೇ ಬಂಧಿಸಿದ್ದರು.