Tuesday, May 30, 2023

Latest Posts

ಅಧಿಕಾರ ಹಂಚಿಕೆ ಮಾತು ನಡೆದಿಲ್ಲ, ಐದು ವರ್ಷವೂ ಸಿದ್ದರಾಮಯ್ಯನವರೇ ಸಿಎಂ: ಎಂ.ಬಿ. ಪಾಟೀಲ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಸಿದ್ದರಾಮಯ್ಯನವರು ಐದು ವರ್ಷಗಳ ಕಾಲ ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದಾರೆ. ಅಧಿಕಾರ ಹಂಚಿಕೆ ಬಗ್ಗೆ ಯಾವುದೇ ಮಾತುಕತೆ ಆಗಿಲ್ಲ. ಹೈಕಮಾಂಡ್ ಈ ಬಗ್ಗೆ ಏನೂ ಹೇಳಿಲ್ಲ ಎಂದು ಸಚಿವ ಎಂ.ಬಿ. ಪಾಟೀಲ್ ಹೇಳಿದ್ದಾರೆ.

ಲೋಕಸಭೆ ಚುನಾವಣೆ ನಂತರ ಯಾರ ಬದಲಾವಣೆಯೂ ಇಲ್ಲ, ಈಗ ಹೇಗಿದೆಯೋ ನಂತರವೂ ಹೀಗೆ ಇರಲಿದೆ. ಮುಖ್ಯಮಂತ್ರಿ ಅಧಿಕಾರ ಹಂಚಿಕೆ ಬಗ್ಗೆ ಎಐಸಿಸಿ ಮಟ್ಟದಲ್ಲಿ ಚರ್ಚೆಯೇ ಆಗಿಲ್ಲ ಎಂದಿದ್ದಾರೆ.

ಎಐಸಿಸಿ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರು ಈ ಬಗ್ಗೆ ಬಹಿರಂಗವಾಗಿಯೇ ಹೇಳಿದ್ದಾರೆ. ಐದು ವರ್ಷವೂ ಸಿದ್ದರಾಮಯ್ಯನೇ ಸಿಎಂ ಎಂದಿದ್ದಾರೆ.

ಕಳೆದ ಸರ್ಕಾರದಲ್ಲಿ ಸಾಕಷ್ಟು ಹಗರಣಗಳು ನಡೆದಿವೆ, ಇವುಗಳನ್ನು ಹಾಗೇ ಬಿಡೋದಿಲ್ಲ, ಸೂಕ್ತ ತನಿಖೆ ಮಾಡಿಸಿ ನಿಜ ಹೊರತರುತ್ತೇವೆ. ಪಿಎಸ್‌ಐ ಹಗರಣ, ಆರೋಗ್ಯ ಇಲಾಖೆ, ನೀರಾವರಿ ಇಲಾಖೆ ಹಾಗೂ ಇತರ ಇಲಾಖೆಗಳಲ್ಲಿ ನಡೆದ ಹಗರಣಗಳ ಬಗ್ಗೆ ತನಿಖೆ ನಡೆಸುತ್ತೇವೆ ಎಂದಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!