ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಿಎಂ ಸಿದ್ದರಾಮಯ್ಯ ಕ್ಲೀನ್ ನಾಯಕ ಅಂದುಕೊಂಡಿದ್ದೆ. 40 ವರ್ಷಗಳ ರಾಜಕಾರಣದಲ್ಲಿ ಒಂದೇ ಒಂದು ಕಪ್ಪು ಚುಕ್ಕಿ ಇರಲಿಲ್ಲ. ಈಗ ಇಡೀ ಬಟ್ಟೆ ಕಪ್ಪು ಇಂಕ್‍ನಲ್ಲಿ ತುಂಬಿ ಹೋಗಿದೆ. ದೊಡ್ಡ ಮನಸು ಮಾಡಿ ರಾಜಾರೋಷವಾಗಿ ರಾಜೀನಾಮೆ ಕೊಡಿ ಎಂದು ನಟ ಹಾಗೂ ರಾಜ್ಯಸಭಾ ಸದಸ್ಯ ಜಗ್ಗೇಶ್ ಆಗ್ರಹಿಸಿದ್ದಾರೆ.
ಸಿದ್ದರಾಮಯ್ಯ ಮಾಡಿದ್ದು ತಪ್ಪು ಎಂದು ನ್ಯಾಯಾಲಯ ಕೂಡ ಹೇಳಿದೆ. ಆದರೂ ಸಿದ್ದರಾಮಯ್ಯ ಸಮರ್ಥಿಸಿಕೊಳ್ಳುತ್ತಿರುವುದು ಸರಿಯಲ್ಲ. ಮುಡಾ ಹಗರಣ ಮೂಲಕ ರಾಷ್ಟ್ರೀಯ, ಅಂತರಾಷ್ಟ್ರೀಯ ಮಟ್ಟದಲ್ಲಿ ಕರ್ನಾಟಕಕ್ಕೆ ಸಿದ್ದರಾಮಯ್ಯ ಘನವಾದ ಹೆಸರು ತಂದುಕೊಟ್ಟಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ.