ಹೊಸದಿಗಂತ ವರದಿ ಕೊಪ್ಪಳ:
ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಜಾತಿ ಸಮೀಕ್ಷೆಯ ಅವಧಿ ವಿಸ್ತರಣೆ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಬಳಿ ಚರ್ಚಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್ ತಂಗಡಗಿ ಹೇಳಿದರು.
ಬಸಾಪುರದ ಲಘು ವಿಮಾನ ನಿಲ್ದಾಣದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಜಾತಿ ಸಮೀಕ್ಷೆಯ ಅವಧಿಯು ಮಂಗಳವಾರ ಕೊನೆಗೊಳ್ಳಲಿದ್ದು, ಅವಧಿ ವಿಸ್ತರಣೆ ಬಗ್ಗೆ ಚರ್ಚಿಸಲಾಗುವುದು ಎಂದರು.
ಕೊಪ್ಪಳ ಜಿಲ್ಲೆಯಲ್ಲಿ ಶೇ.96 ರಷ್ಟು ಸಮೀಕ್ಷೆ ಪೂರ್ಣವಾಗಿದೆ. ಕಾರಟಗಿ, ಕನಕಗಿರಿ, ಯಲಬುರ್ಗಾ, ಕುಕನೂರಿನಲ್ಲಿ ಸಮೀಕ್ಷೆ ಪೂರ್ಣಗೊಂಡಿದೆ ಎಂದರು.
ಪೋಸ್ಟ್‌ಪೋನ್ ಆಗಲಿದ್ಯಾ ಜಾತಿಗಣತಿ ಡೆಡ್‌ಲೈನ್ ? ಸಚಿವ ಶಿವರಾಜ್ ತಂಗಡಗಿ ಹೇಳಿದ್ದೇನು?
